ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ
Tumkurnews
ತುಮಕೂರು; ಹಿರೇಹಳ್ಳಿ ಕೈಗಾರಿಕಾ ಪ್ರದೇಶ ತುಮಕೂರು ಕೇಂದ್ರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಮತ್ತು ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಇವರ ಸಹಯೋಗದಲ್ಲಿ 2022-23ನೇ ಸಾಲಿನ ಆಟೋಮೋಟಿವ್ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಪೂರ್ಣ ಅವಧಿಯ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಐಟಿಐ ಪಿಟ್ಟರ್ ಅಥವಾ ಐಟಿಐ ವೆಲ್ಡರ್’ನಲ್ಲಿ ವಿದ್ಯಾರ್ಹತೆ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರದೊಂದಿಗೆ ಆಗಸ್ಟ್ 22ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು-572168, ದೂ.ವಾ.ಸಂ. 9448200407, 9739172455, 8660101978ನ್ನು ಸಂಪರ್ಕಿಸಬೇಕೆಂದು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours