ಸರ್ವರಿಗೂ ಸೂರು; ಜಿಲ್ಲೆಯಲ್ಲಿ 7 ಸಾವಿರ ಮನೆಗಳ ನಿರ್ಮಾಣ ನನೆಗುದಿ

1 min read

Tumkurnews
ತುಮಕೂರು; ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಯಡಿ ಈವರೆಗೂ ನಿರ್ಮಾಣ ಕಾರ್ಯ ಪ್ರಾರಂಭಿಸದೇ ಇರುವ 7497 ಮನೆ ನಿರ್ಮಾಣ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಸಿಇಒ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮನೆ ಇಲ್ಲದ ಗ್ರಾಮೀಣ ಪ್ರದೇಶದವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಕಿ ಇರುವ ಮನೆ ನಿರ್ಮಾಣ ಕಾಮಗಾರಿಯನ್ನು ಅಕ್ಟೋಬರ್ ಮಾಹೆಯೊಳಗೆ ಪೂರ್ಣಗೊಳಿಸಬೇಕು ಎಂದು ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಯಡಿ 2010 ರಿಂದ 2021ರವರೆಗೆ 21166 ಮನೆಗಳ ನಿರ್ಮಾಣ ಮಾಡಬೇಕಾಗಿದ್ದು, ಈ ಪೈಕಿ 5554 ಮನೆಗಳು ಗೋಡೆ ಮತ್ತು ಛಾವಣಿ ಹಂತದಲ್ಲಿವೆ. ಬುನಾದಿ ಹಂತದಲ್ಲಿರುವ 8115 ಮನೆಗಳ ನಿರ್ಮಾಣ ಕಾಮಗಾರಿಯನ್ನೂ ಸಹ ಅಕ್ಟೋಬರ್ ಮಾಹೆಯೊಳಗೆ ಪೂರ್ಣಗೊಳಿಸಬೇಕು. ಈವರೆಗೂ ನಿರ್ಮಾಣ ಕಾರ್ಯ ಪ್ರಾರಂಭಿಸದೇ ಇರುವ 7497 ಮನೆ ನಿರ್ಮಾಣ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು, ಪ್ರಸಕ್ತ ವರ್ಷದಲ್ಲಿ ಸುಮಾರು 12210 ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಫಲಾನುಭವಿಗಳನ್ನು ಆಯ್ಕೆ ಮಾಡಿ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧ, ಹೋಟೆಲ್’ಗಳಿಗೆ ಜಿಲ್ಲಾಧಿಕಾರಿ ಮಹತ್ವದ ಸೂಚನೆ
ಸರ್ಕಾರದಿಂದ ಈಗಾಗಲೇ ವಸತಿ ನಿರ್ಮಾಣಕ್ಕೆ ಸಂಬಂಧಿಸಿದಂತೆ 9,000 ಹಕ್ಕುಪತ್ರಗಳು ಬಂದಿದ್ದು, ಹಕ್ಕುದಾರರಿಗೆ ಶೀಘ್ರವೇ ಪತ್ರಗಳನ್ನು ನೀಡಲಾಗುವುದು. ಹಕ್ಕುಪತ್ರ ಪಡೆದವರು ಕೂಡಲೇ ಮನೆ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಬೇಕೆಂದು ಸೂಚನೆ ನೀಡಲಾಗಿದೆ ಎಂದರಲ್ಲದೆ, ತಹಶೀಲ್ದಾರರು ತಮ್ಮ ತಾಲ್ಲೂಕುಗಳಲ್ಲಿ ವಸತಿ ಯೋಜನೆಗಾಗಿ ಮಂಜೂರು ಮಾಡಿರುವ ಜಮೀನನ್ನು ಹದ್ದುಬಸ್ತು ಮಾಡಿ ನಿವೇಶನವಾಗಿ ಪರಿವರ್ತಿಸಿ ಸೆಪ್ಟೆಂಬರ್ ಮಾಹೆಯೊಳಗೆ ಹಂಚಿಕೆ ಮಾಡುವಲ್ಲಿ ಕ್ರಮವಹಿಸಬೇಕೆಂದು ಸೂಚನೆ ನೀಡಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ ಸಭೆಗೆ ಮಾಹಿತಿ ನೀಡುತ್ತಾ, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಹಾಗೂ ವಾಜಪೇಯಿ ವಸತಿ ಯೋಜನೆಯಡಿ 2021-22ನೇ ಸಾಲಿನಲ್ಲಿ 1000 ಮನೆಗಳನ್ನು ನಿರ್ಮಾಣ ಮಾಡಲು ಸರ್ಕಾರದಿಂದ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ 441 ಫಲಾನುಭವಿಗಳನ್ನು ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆಯಲಾಗಿದ್ದು, 126 ಫಲಾನುಭವಿಗಳ ಪಟ್ಟಿಯನ್ನು ಅನುಮೋದನೆಗಾಗಿ ಸಲ್ಲಿಸಬೇಕಾಗಿದೆ. ಉಳಿದಂತೆ 433 ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಪಾವಗಡದಲ್ಲಿ ಚಿರತೆ ಪ್ರತ್ಯಕ್ಷ; ವಿಡಿಯೋ

About The Author

You May Also Like

More From Author

+ There are no comments

Add yours