ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ; ಜಿಲ್ಲಾಧಿಕಾರಿ ಸಭೆ

1 min read

 

Tumkurnews
ತುಮಕೂರು; ಜಿಲ್ಲೆಯಲ್ಲಿ ಕಳೆದ ಜುಲೈ ಅಂತ್ಯ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಭಾಗಶಃ ಮತ್ತು ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು.

ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧ, ಹೋಟೆಲ್’ಗಳಿಗೆ ಜಿಲ್ಲಾಧಿಕಾರಿ ಮಹತ್ವದ ಸೂಚನೆ
ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್’ನಲ್ಲಿ ಅವರು ಮಾತನಾಡಿದರು.
ಮಳೆ ನಷ್ಟ ಪರಿಹಾರ ನೀಡಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಮಳೆಯಿಂದ ಮೃತಪಟ್ಟ 8 ಪ್ರಕರಣಗಳ ವಾರಸುದಾರರಿಗೆ ಈಗಾಗಲೇ ಪರಿಹಾರ ನೀಡಲಾಗಿದ್ದು, ಹಾನಿಗೊಳಗಾದ ಮನೆ ಮಾಲೀಕರಿಗೆ ಪರಿಹಾರ ನೀಡುವ ಕೆಲವೇ ಪ್ರಕರಣಗಳು ಬಾಕಿ ಇವೆ, ಕೂಡಲೇ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ಸರ್ವರಿಗೂ ಸೂರು; ಜಿಲ್ಲೆಯಲ್ಲಿ 7 ಸಾವಿರ ಮನೆಗಳ ನಿರ್ಮಾಣ ನನೆಗುದಿ
ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19ರಿಂದ ಮೃತಪಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸ್ವೀಕೃತ ಎಲ್ಲಾ ಅರ್ಜಿಗಳನ್ನು ಅನುಮೋದಿಸಿ ಈಗಾಗಲೇ ಪರಿಹಾರ ನೀಡಲಾಗಿದೆ. ಕೋವಿಡ್‍ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಸಂಬಂಧ ಯಾವುದೇ ಅರ್ಜಿಯನ್ನು ವಿಲೇವಾರಿ ಮಾಡದೆ ಬಾಕಿ ಇಟ್ಟುಕೊಂಡು ವಿಳಂಬ ಮಾಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಕೋವಿಡ್ ಪರಿಹಾರದ ಯಾವುದೇ ಅರ್ಜಿಯನ್ನು ಬಾಕಿ ಇಟ್ಟುಕೊಳ್ಳದೆ 1 ವಾರದೊಳಗಾಗಿ ವಿಲೇವಾರಿ ಮಾಡಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

You May Also Like

More From Author

+ There are no comments

Add yours