ಮಾಜಿ ಶಾಸಕ ಕೆ.ಎನ್ ರಾಜಣ್ಣ ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ವಿರುದ್ಧ ತನಿಖೆಗೆ ಆದೇಶ
Tumkurnews
ಬೆಂಗಳೂರು: ಸಾಲ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಡಿಸಿಸಿ ಬ್ಯಾಂಕ್ ಮೇಲೆ ತನಿಖೆಗೆ ಆದೇಶಿಸಲಾಗಿದೆ. ಸದರಿ ಬ್ಯಾಂಕ್’ಗೆ ಜಿ.ಎಂ ರವೀಂದ್ರ ಅವರನ್ನು ಹೆಚ್ಚುವರಿ ರಿಜಿಸ್ಟ್ರಾರ್ ಆಗಿ ನೇಮಕ ಮಾಡಲಾಗಿದ್ದು, ತುಮಕೂರು ಡಿಸಿಸಿ ಬ್ಯಾಂಕ್ ಮೇಲಿರುವ ಆರೋಪಗಳ ಕುರಿತು 15 ದಿನಗಳೊಳಗೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರು( ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್ ರಾಜಣ್ಣ), ‘ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ತಮ್ಮ ಕ್ಷೇತ್ರಕ್ಕೆ 100 ಕೋಟಿ ರೂ. ನೀಡಿದ್ದಾರೆ’ ಎಂಬ ದೂರು ಬಂದಿದೆ. ಸಾಲ ನೀಡುವುದಕ್ಕೆ ಶೇ.10 ರಷ್ಟು ಷೇರು ಹಣವನ್ನು ಸಂಗ್ರಹ ಮಾಡಲಾಗುತ್ತದೆ. ಇದರಲ್ಲಿ ಶೇ.5 ರಷ್ಟು ಡಿಸಿಸಿ, ಶೇ.5 ಅಪೆಕ್ಸ್ ಬ್ಯಾಂಕ್‍ಗೆ ವರ್ಗಾವಣೆ ಮಾಡಬೇಕು. ಆದರೆ ಶೇ.10 ರಷ್ಟು ಷೇರು ಹಣವನ್ನು ಡಿಸಿಸಿ ಬ್ಯಾಂಕ್ ನವರೇ ಇಟ್ಟುಕೊಂಡಿದ್ದಾರೆ ಎಂಬ ದೂರು ಬಂದಿದೆ. ಈ ಬಗ್ಗೆ ಕೂಡ ತನಿಖೆ ಮಾಡಿ ವರದಿ ಬಂದ ನಂತರ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಸೌದಿಗೆ ಹೋಗಿ ಸೆಟಲ್ ಆದ ಪತ್ನಿ; ಮಕ್ಕಳೊಂದಿಗೆ ವಿಷ ಸೇವಿಸಿ ಪತಿ ಆತ್ಮಹತ್ಯೆ
ತುಮಕೂರಿನಲ್ಲಿ ರೈತರಿಂದ ಅನಧಿಕೃತವಾಗಿ 1,300 ರೂ. ಸಂಗ್ರಹ ಮಾಡಿರುವುದರ ಬಗ್ಗೆ ಅಧಿಕೃತವಾಗಿ ಯಾರೂ ದೂರು ನೀಡಿಲ್ಲ. ಸಚಿವ ಮಾಧುಸ್ವಾಮಿ ಅವರು ಹೇಳಿದ ನಂತರ ರೈತರಿಂದ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ತುಮಕೂರು ಮಾತ್ರವಲ್ಲದೇ ಇತರೆ ಡಿಸಿಸಿ ಬ್ಯಾಂಕ್‍ಗಳ ಬಗ್ಗೆ ಕೂಡ ಪರಿಶೀಲನೆ ನಡೆಸಲು ಸೂಚಿಸಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಅಡ್ಡಿ ಇಲ್ಲ; ನಮಾಜ್’ಗೆ ಅವಕಾಶ ಕೊಡಲ್ಲ; ಸಚಿವ ನಾಗೇಶ್ ಖಡಕ್ ನುಡಿ
+ There are no comments
Add yours