ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

1 min read

 

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ
Tumkurnews
ತುಮಕೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ (ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿನಿಲಯಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹೊಸ ವಿದ್ಯಾರ್ಥಿಗಳು www.bcwd.karnataka.gov.inಜಾಲತಾಣದ ಮೂಲಕ ಆಗಸ್ಟ್ 22, 2022 ರಿಂದ ಸೆಪ್ಟೆಂಬರ್ 12, 2022ರೊಳಗಾಗಿ ಸಲ್ಲಿಸಬಹುದಾಗಿದೆ.

ವಿಕಲ ಚೇತನ ಅಭ್ಯರ್ಥಿಗಳಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಹೊಸ ಅರ್ಜಿಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಸೆಪ್ಟೆಂಬರ್ 16, 2022ರಂದು ಪರಿಶೀಲನೆ ಮಾಡಿದ ನಂತರ ಕೌನ್ಸಲಿಂಗ್ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಸೆಪ್ಟೆಂಬರ್ 20, 2022ರಂದು ಪ್ರಕಟಿಸಲಾಗುವುದು ಹಾಗೂ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಸೆಪ್ಟೆಂಬರ್ 26, 2022ರೊಳಗೆ ಪ್ರವೇಶ ಪಡೆಯಬಹುದಾಗಿದೆ.

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ತೊಂದರೆಗಳಾದಲ್ಲಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕರು, ಜಿಲ್ಲಾ, ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದು ಅಥವಾ ಸಹಾಯವಾಣಿ ಸಂಖ್ಯೆ 080-8050370006ನ್ನು ಸಂಪರ್ಕಿಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸರಾ ಕ್ರೀಡಾಕೂಟಕ್ಕೆ ದಿನಾಂಕ ನಿಗದಿ; ಇಲ್ಲಿದೆ ತಾಲ್ಲೂಕುವಾರು ವೇಳಾಪಟ್ಟಿ

You May Also Like

More From Author

+ There are no comments

Add yours