ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Tumkurnews
ತುಮಕೂರು: ಕೇಂದ್ರ ಸಾಮಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ವತಿಯಿಂದ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್(NSP) ಮುಖಾಂತರ ಕೇಂದ್ರ ಪುರಸ್ಕೃತ ಟಾಪ್ ಕ್ಲಾಸ್ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯಸಭಾ ಸದಸ್ಯ ಜಗ್ಗೇಶ್ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ
ಕೇಂದ್ರ ಪುರಸ್ಕೃತ ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನವನ್ನು ಪಡೆಯಲು ರಾಜ್ಯದ ಟಾಪ್ ಸ್ಕೂಲ್ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ ಮುಖಾಂತರ ಸೆಪ್ಟೆಂಬರ್ 11, 2022ರಂದು ಪರೀಕ್ಷೆಯನ್ನು ನಡೆಸಲಾಗುವುದು.
ಅರ್ಹ ವಿದ್ಯಾರ್ಥಿಗಳು ಆಗಸ್ಟ್ 26, 2022ರೊಳಗಾಗಿ https://yet.nta.ac.in ಮುಖಾಂತರ ಅರ್ಜಿ ಸಲ್ಲಿಸಿ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಕಲ ಚೇತನ ಅಭ್ಯರ್ಥಿಗಳಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours