ದಸರಾ ಕ್ರೀಡಾಕೂಟಕ್ಕೆ ದಿನಾಂಕ ನಿಗದಿ; ಇಲ್ಲಿದೆ ತಾಲ್ಲೂಕುವಾರು ವೇಳಾಪಟ್ಟಿ

1 min read

 

ದಸರಾ ಕ್ರೀಡಾಕೂಟಕ್ಕೆ ದಿನಾಂಕ ನಿಗದಿ
Tumkurnews
ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲೆಯ 10 ತಾಲ್ಲೂಕುಗಳಲ್ಲಿ ದಸರಾ ಕ್ರೀಡಾಕೂಟವು ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ನಡೆಯಲಿದೆ.
ಕೊರಟಗೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ಆಗಸ್ಟ್ 27 ಶನಿವಾರದಂದು, ಮಧುಗಿರಿ ಪಟ್ಟಣದ ರಾಜೀವ್ ಗಾಂಧಿ ತಾಲ್ಲೂಕು ಕ್ರೀಡಾಂಗಣ ಮತ್ತು ಕುಣಿಗಲ್ ತಾಲ್ಲೂಕು ಕ್ರೀಡಾಂಗಣದಲ್ಲಿ ಆಗಸ್ಟ್ 28 ಭಾನುವಾರದಂದು ನಡೆಯಲಿದೆ.

ರಾಜ್ಯಸಭಾ ಸದಸ್ಯ ಜಗ್ಗೇಶ್ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ
ಶಿರಾದ ವಿವೇಕಾನಂದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಗಸ್ಟ್ 29 ಸೋಮವಾರದಂದು ನಡೆಯಲಿದೆ, ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 2ರ ಭಾನುವಾರದಂದು ಆಯೋಜಿಸಲಾಗಿದೆ. ಚಿಕ್ಕನಾಯಕನಹಳ್ಳಿಯಲ್ಲಿ ಸೆಪ್ಟೆಂಬರ್ 3 ಶನಿವಾರದಂದು ಜರುಗಲಿದೆ.
ತುರುವೇಕೆರೆ, ಗುಬ್ಬಿ, ಪಾವಗಡದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 4 ಭಾನುವಾರದಂದು ಮತ್ತು ತುಮಕೂರು ಜೂನಿಯರ್ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 6 ಶುಕ್ರವಾರದಂದು ನಡೆಯಲಿದೆ.

ತುಮಕೂರು‌ ಜಿಲ್ಲಾಸ್ಪತ್ರೆ ವಿರುದ್ಧ ತನಿಖೆಗೆ ಆದೇಶ
ಅಥ್ಲೆಟಿಕ್ಸ್‌ ನಲ್ಲಿ ರಿಲೇ, ಉದ್ದಜಿಗಿತ, ಹರ್ಡಲ್ಸ್, ಎತ್ತರ ಜಿಗಿತ, ತ್ರಿವಿಧ ಜಿಗಿತ (ಟ್ರಿಪಲ್ ಜಂಪ್) ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ ನಡೆಯಲಿದೆ.
ಗುಂಪು ಸ್ಪರ್ಧೆಗಳಲ್ಲಿ ಕಬಡ್ಡಿ, ಖೋ-ಖೋ, ವಾಲಿಬಾಲ್, ಥ್ರೋಬಾಲ್, ಫುಟ್ಬಾಲ್ ಸ್ಪರ್ಧೆಗಳು ನಡೆಯಲಿವೆ . ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲ ಚೇತನ ಅಭ್ಯರ್ಥಿಗಳಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

 

About The Author

You May Also Like

More From Author

+ There are no comments

Add yours