ಪೊಲೀಸ್ ಇಲಾಖೆಯಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ; ಶುಭ ಸುದ್ದಿ ನೀಡಿದ ಗೃಹ ಸಚಿವ

1 min read

ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಿರೀಕ್ಷೆ

Tumkurnews
ಬೆಂಗಳೂರು; ಪೊಲೀಸ್ ಇಲಾಖೆ ಸೇರಬೇಕೆಂಬ ಆಸೆ ಹೊಂದಿರುವ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಭ ಸುದ್ದಿಯೊಂದನ್ನು ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರ ಅಗತ್ಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ 5 ಸಾವಿರ ಪೊಲೀಸರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ನಡೆದು, ಫಲಿತಾಂಶ ಕೂಡ ಪ್ರಕಟವಾಗಿದೆ. ಸಾವಿರಾರು ಅಭ್ಯರ್ಥಿಗಳು ಸರ್ಕಾರಿ ಉದ್ಯೋಗದ ನೇಮಕಾತಿ ನಿರೀಕ್ಷೆಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿರುವುದು ಪೊಲೀಸ್ ಉದ್ಯೋಗಕಾಂಕ್ಷಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಹೀಗಾಗಿ ಆಕಾಂಕ್ಷಿಗಳು ಈಗಿನಿಂದಲೇ ಅಗತ್ಯ ತಯಾರಿ, ಅಭ್ಯಾಸ ಮಾಡಿಕೊಳ್ಳುವುದು ಉತ್ತಮವಾಗಿದೆ.

ಸಬ್‍ ಇನ್ಸ್ ಪೆಕ್ಟರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours