ಶಿರಾ ಅಪಘಾತ; ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ

1 min read

Tumkurnews
ತುಮಕೂರು; ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತ ಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಗುರುವಾರ ಸಂಜೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ನಂತರ ಅವರು ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೃತರಿಗೆ ತಲಾ 2ಲಕ್ಷ ರೂ. ಪರಿಹಾರವನ್ನು ಮತ್ತು ಗಾಯಾಳುಗಳಿಗೆ 50 ಸಾವಿರ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದ ಪರವಾಗಿ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
ಇಂದಿನ ಅಪಘಾತದಲ್ಲಿ ಗಾಯಗೊಂಡವರಿಗೆ ಆಸ್ಪತ್ರೆಗಳಲ್ಲಿ ಸಂಪೂರ್ಣವಾಗಿ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುವುದು, ಜನರ ಸುರಕ್ಷತೆಗಾಗಿ ಅನೇಕ ಕಾಯ್ದೆಗಳು ರಚಿಸಲಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಪಾಲಿಸಬೇಕು ಎಂದರು.
ಓವರ್‍ಲೋಡ್ ಮಾಡಿಕೊಂಡು ಸಾಗುತ್ತಿದ್ದಂತಹ 5 ಕ್ರೂಸರ್’ಗಳನ್ನು ಜಿಲ್ಲೆಯಲ್ಲಿ ಪೊಲೀಸರು ಹಿಡಿದಿದ್ದಾರೆ. ಈ ರೀತಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಸಾಗಿಸುವ ವಾಹನಗಳನ್ನು ಯಾವುದೇ ಮುಲಾಜಿಲ್ಲದೆ, ತಡೆದು ನಿಲ್ಲಿಸಿ ಪ್ರಯಾಣಿಕರನ್ನು ಬಸ್ಸಿನಲ್ಲಿ ಸಾಗಿಸುವ ವ್ಯವಸ್ಥೆ ಮಾಡಬೇಕೆಂದು ಪೊಲೀಸರಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು.
ಅಪಘಾತದ ಸುದ್ಧಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ದೊರೆಯುವ ರೀತಿ ವ್ಯವಸ್ಥೆ ಮಾಡಿರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಷಹಪೂರ್ ವಾಡ್, ಜಿಲ್ಲಾ ಸರ್ಜನ್ ಡಾ.ಟಿ.ಎ ವೀರಭದ್ರಯ್ಯ ಉಪಸ್ಥಿತರಿದ್ದರು.

ಭೀಕರ ರಸ್ತೆ ಅಫಘಾತ; 9 ಮಂದಿ ದುರ್ಮರಣ

About The Author

You May Also Like

More From Author

+ There are no comments

Add yours