ಕಮಿಷನ್ ದಂಧೆಯಲ್ಲಿ ಕಾಂಗ್ರೆಸ್ ಭಾಗಿಯಾಗಿಲ್ಲ; ಎಚ್.ಡಿ.ಕೆ ಆರೋಪಕ್ಕೆ ಪರಂ ಪ್ರತಿಕ್ರಿಯೆ

1 min read

 

Tumkurnews
ತುಮಕೂರು; ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಮೀಷನ್ ದಂಧೆ ನಡೆದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಾಂಗ್ರೆಸ್ ಸಚಿವರು ಯಾರು ಕೂಡ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ ಪರಮೇಶ್ವರ್ ತಿಳಿಸಿದರು.

ತೀತಾ ಜಲಾಶಯದ ಸೇತುವೆ ಸಂಪೂರ್ಣ ಕುಸಿತ; ಸಂಚಾರ ಸ್ಥಗಿತ
ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಡೆದ ದಿ. ಸೂಲಗಿತ್ತಿ ನರಸಮ್ಮನವರ 102ನೇ ಜಯಂತ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಅವಧಿಯಲ್ಲಿ ಪರ್ಸಂಟೆಜ್ ದಂಧೆ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಈಗ ಹೇಳಿದ್ದರೆ ಯಾವ ಸಚಿವಾಲಯದಲ್ಲಿ, ಯಾವ ಸಚಿವರು ಮಾಡಿದ್ದಾರೆ ಎಂಬುದನ್ನು ಅವರೇ ಹೇಳಬೇಕಿದೆ. ಏಕೆಂದರೆ ಮುಖ್ಯಮಂತ್ರಿಯಾಗಿದ್ದವರು ಅವರು, ಹಾಗಾಗಿ ಜವಾಬ್ದಾರಿಯಿಂದ ಈ ಹೇಳಿಕೆ ನೀಡಿದ್ದಾರೆ ಎಂದೆನಿಸುತ್ತದೆ. ಆದರೆ ನಮ್ಮ ಕಾಂಗ್ರೆಸ್‍ನ ಸಚಿವರು ಯಾರೂ ಸಹ ಈ ಪರ್ಸಂಟೆಜ್ ದಂಧೆಯಲ್ಲಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಮದುವೆಯಾಗುವಂತೆ ಕಿರುಕುಳ; 9ನೇ ತರಗತಿ‌ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯ ಬಿಜೆಪಿ ಸರ್ಕಾರ ಗುತ್ತಿಗೆದಾರರಿಂದ 40 ಪರ್ಸಂಟೆಜ್ ಕಮೀಷನ್ ಪಡೆಯುತ್ತಿದೆ, ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿಯವರಿಗೆ ಗುತ್ತಿಗೆದಾರ ಕೆಂಪಣ್ಣನವರು ಪತ್ರ ಬರೆದಿದ್ದಾರೆ. ಈ ಪತ್ರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ರಾಜ್ಯದ ಜನ ಬಿಜೆಪಿ ಸರ್ಕಾರದ ಆಡಳಿತವನ್ನು ಗಮನಿಸುತ್ತಿದ್ದಾರೆ. ಮುಂಬರುವ 2023ರಲ್ಲಿ ಬಿಜೆಪಿಗೆ ಪ್ರತ್ಯುತ್ತರವನ್ವು ಜನರೇ ಕೊಡಲಿದ್ದಾರೆ ಎಂದರು.

58 ವರ್ಷದ ಪುರುಷ, 23 ವರ್ಷದ ಮಹಿಳೆ ನಾಪತ್ತೆ

About The Author

You May Also Like

More From Author

+ There are no comments

Add yours