Tumkurnews
ತುಮಕೂರು; ತುಮಕೂರು ವಿವಿಯಲ್ಲಿ ವಿ.ಡಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು ವಿವಿ ಸಿಂಡಿಕೇಟ್ ಸಭೆ ಒಪ್ಪಿಗೆ ಸೂಚಿಸಿರುವುದರ ಹಿಂದೆ ಸಿಂಡಿಕೇಟ್ ಸದಸ್ಯರಿಗೆ ಸರ್ಕಾರ ಸೂಚನೆ ಕೊಟ್ಟಿರಬಹುದು. ಹಾಗಾಗಿ ರಾಜಕೀಯ ಒತ್ತಡದಿಂದ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು ಮುಂದಾಗಿರಬಹುದು ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕಮಿಷನ್ ದಂಧೆಯಲ್ಲಿ ಕಾಂಗ್ರೆಸ್ ಭಾಗಿಯಾಗಿಲ್ಲ; ಎಚ್.ಡಿ.ಕೆ ಆರೋಪಕ್ಕೆ ಪರಂ ಪ್ರತಿಕ್ರಿಯೆ
ನಗರದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅಧ್ಯಯನ ಪೀಠ ಸ್ಥಾಪನೆ ಬಗ್ಗೆ ಏಕಾಏಕಿ ಕುಲಪತಿಗಳು, ಕುಲಸಚಿವರು, ವಿವಿ ಸಿಂಡಿಕೇಟ್ ಸದಸ್ಯರುಗಳು ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.
ತುಮಕೂರು ವಿವಿಯನ್ನು ಇದುವರೆಗೆ ಆಡಳಿತ ನಡೆಸಿರುವ ಎಲ್ಲ ಸರ್ಕಾರಗಳು ನಿರ್ಲಕ್ಷ್ಯ ಮಾಡಿವೆ. ನನ್ನ ಪ್ರಯತ್ನದಿಂದ ವಿಶ್ವವಿದ್ಯಾನಿಲಯವನ್ನು ಸ್ಥಾಪನೆಯಾಯಿತು. ಆದರೆ
ಇದುವರೆಗೂ ಹೊಸ ಕ್ಯಾಂಪಸ್‍ಗೆ ಹೋಗಲು ಸಾಧ್ಯವಾಗಿಲ್ಲ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚು ಅನುದಾನ ಬಿಡುಗಡೆ ಮಾಡಿ ಆದಷ್ಟು ಬೇಗ ಹೊಸ ಕ್ಯಾಂಪಸ್‍ಗೆ ತುಮಕೂರು ವಿವಿ ಸ್ಥಳಾಂತರವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
58 ವರ್ಷದ ಪುರುಷ, 23 ವರ್ಷದ ಮಹಿಳೆ ನಾಪತ್ತೆ
+ There are no comments
Add yours