ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಬಂಧನ?

1 min read

Tumkurnews
ಹಾವೇರಿ; ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ‌ಬಂಧಿಸಿದ್ದಾರೆ ಎನ್ನುವ ವದಂತಿ ಹಬ್ಬಿತ್ತು.
ಜಿಲ್ಲೆಯ ಬಂಕಾಪುರ ಬಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಶ್ರೀಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು.  ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮುರುಘಾ ಶರಣರು ಬಂಧನದ ಭೀತಿ ಎದುರಿಸುತ್ತಿದ್ದರು. ಸೋಮವಾರ ಅವರು‌ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ವದಂತಿ; ಶ್ರೀಗಳ ಬಂಧನದ ವದಂತಿ ಬೆನ್ನಲ್ಲೇ ಮುರುಘಾ ಶರಣರು ಸೋಮವಾರ ಮಧ್ಯಾಹ್ನದ ವೇಳೆಗೆ ಮುರುಘಾ ಮಠಕ್ಕೆ ಆಗಮಿಸಿದ್ದಾರೆ. ಮಠದಲ್ಲಿ ಭಕ್ತರನ್ನು ಉದ್ದೇಶಿಸಿ ಶ್ರೀಗಳು ಮಾತನಾಡಿದ್ದು, ಬಂದಿರುವ ಆರೋಪಗಳನ್ನು ಎದುರಿಸುವುದಾಗಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours