Tumkurnews
ಬೆಂಗಳೂರು; ರಾಜ್ಯದ ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಮಂಗಳವಾರ ನಿಧನರಾದರು.
ಉಮೇಶ್ ಕತ್ತಿ ಅವರು ಜೆ.ಎಚ್ ಪಟೇಲ್, ಬಿ.ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರಗಳಲ್ಲಿ ಸಚಿವರಾಗಿದ್ದರು.
ರಜೆ ಘೋಷಣೆ; ಸಚಿವ ಉಮೇಶ್ ಕತ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದರು. ಅವರ ನಿಧನದಿಂದ ತುಂಬಲಾರದ ನಷ್ಟ ಸಂಭವಿಸಿದೆ ಎಂದು ಭಾವುಕರಾದರು. ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಳಗಾವಿಗೆ ಕೊಂಡೊಯ್ಯಲಾಗುವುದು. ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಒಂದು ದಿನ(ಬುಧವಾರ) ರಜೆ ಘೋಷಿಸಿ ಶೋಕಾಚರಣೆ ಆಚರಿಸಲಾಗುವುದು ಎಂದು ತಿಳಿಸಿದರು.
+ There are no comments
Add yours