ಕುಣಿಗಲ್; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read

 

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Tumkurnews
ತುಮಕೂರು; ಕುಣಿಗಲ್ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಉಲಿಯೂರು, ಹಾಲಗೆರೆ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಕಟ್ಟೆಪಾಳ್ಯ ಹಾಗೂ ಬೆಟ್ಟಹಳ್ಳಿ ಮಿನಿ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಕಾರ್ಯಕರ್ತೆ, ಬಾಗೇನಹಳ್ಳಿ, ಶೆಟ್ಟಿಗೆರೆ, ಕೀಲಾರ, ಬೈರನಾಯ್ಕನಹಳ್ಳಿ, ತಂಗಚ್ಚಹಳ್ಳಿ, ಚಿಕ್ಕಮಾವತ್ತೂರು, ಎ.ಹೊಸಹಳ್ಳಿ, ರಾಘವನಹೊಸೂರು, ಚನ್ನತಿಮ್ಮನಪಾಳ್ಯ, ಸೂಳೆಕುಪ್ಪೆ, ಮಲ್ಲಾಘಟ್ಟ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗಳಿಗೆ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು www.anganawadirecruit.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕುಣಿಗಲ್ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ದೂ.ವಾ.ಸಂ. 08132-222691ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

About The Author

You May Also Like

More From Author

+ There are no comments

Add yours