ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ On Line ಅರ್ಜಿ ಆಹ್ವಾನ

1 min read

Tumkurnews
ತುಮಕೂರು; ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳಿಗೆ URL:https://sevasindu.karnataka.gov.in/sevasindhu/Department ತಂತ್ರಾಂಶದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ; ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ ಸೌಲಭ್ಯಗಳಿಗೆ ಅರ್ಹ ಅಭ್ಯರ್ಥಿಗಳು ಮೇಲಿನ ಸಾರ್ವಜನಿಕ ವೆಬ್‍ಸೈಟ್‍ನಲ್ಲಿ ಖುದ್ದು ಅರ್ಜಿ ಸಲ್ಲಿಸಬಹುದು ಅಥವಾ ಸೇವಾಸಿಂಧು ಕೇಂದ್ರಗಳಿಗೆ ಭೇಟಿ ನೀಡಿ ಸೂಕ್ತ ದಾಖಲಾತಿಗಳೊಂದಿಗೆ ಸೆ.20ರೊಳಗಾಗಿ ಅರ್ಜಿ ಸಲ್ಲಿಸುವುದು.
ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸಿರುವ ಬಗ್ಗೆ ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ದ್ವಿಪ್ರತಿಯಲ್ಲಿ ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶಿ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ರವರಿಗೆ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours