ಹಾಸ್ಟೆಲ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

1 min read

Tumkurnews
ತುಮಕೂರು; ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ(ಸಾಮಾನ್ಯ ಪದವಿ ಕೋರ್ಸ್ ವಿದ್ಯಾರ್ಥಿಗಳು)ಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.22ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಸೆ.26ರಂದು ಪರಿಶೀಲನೆ ಮಾಡುವರು. ಕೌನ್ಸಿಲಿಂಗ್ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಸೆ.30ರಂದು ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಅ.6ರೊಳಗಾಗಿ ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಸಂಪರ್ಕಿಸಬಹುದು ಪ್ರಕಟಣೆ ತಿಳಿಸಿದೆ.

ಸರ್ಕಾರಿ ನೌಕರರ ಮಕ್ಕಳಿಗಾಗಿ ಶಿಶುಪಾಲನ ಕೇಂದ್ರ ಆರಂಭ

About The Author

You May Also Like

More From Author

+ There are no comments

Add yours