ಟಿಪ್ಪು ಎಕ್ಸ್‌ಪ್ರೆಸ್‌ ಇನ್ನು ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌!; ಎರಡು ರೈಲುಗಳ ಹೆಸರು‌ ಬದಲು

1 min read

 

ನವದೆಹಲಿ; ಟಿಪ್ಪು ಎಕ್ಸ್‌ಪ್ರೆಸ್‌ ಹಾಗೂ ಮೈಸೂರು- ತಾಳಗುಪ್ಪ ರೈಲುಗಳ ಹೆಸರು ಬದಲಾಗಿದ್ದು, ಮೈಸೂರು ಸಂಸದ ಪ್ರತಾಪ್ ಸಿಂಹ ಈ ವಿಚಾರವಾಗಿ ಸಂತಸ ಹಂಚಿಕೊಂಡಿದ್ದಾರೆ.
ಟಿಪ್ಪು ಎಕ್ಸ್‌ಪ್ರೆಸ್‌ ಇನ್ನು ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಬದಲಾಗಿದೆ. ಜೊತೆಗೆ ಮೈಸೂರು-ತಾಳಗುಪ್ಪ ರೈಲು ಕುವೆಂಪು ಎಕ್ಸ್‌ಪ್ರೆಸ್‌ ಎಂದು ಹೆಸರು ಬದಲಾವಣೆ ಮಾಡಲಾಗಿದೆ.
ಪ್ರತಾಪ್ ಸಿಂಹ ಸಂತಸ; ಈ ಕುರಿತು ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ; ಪ್ರಹ್ಲಾದ್ ಜೋಶಿ
“ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ‘ಒಡೆಯರ್ ಎಕ್ಸ್‌ಪ್ರೆಸ್’ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ ಪ್ರೆಸ್” ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! ಕುವೆಂಪು ಹೆಸರು ಸೂಚಿಸಿದ ಸ್ನೇಹಿತರಾದ ಡಿಪಿ ಸತೀಶ್ @dp_satish ರಿಗೆ ಧನ್ಯವಾದಗಳು! ಸದಾ ಆಶೀರ್ವದಿಸುವ ನಿಮಗೂ ಥಾಂಕ್ಯೂ” ಎಂದು ಬರೆದುಕೊಂಡಿದ್ದಾರೆ.

About The Author

You May Also Like

More From Author

+ There are no comments

Add yours