ನ್ಯಾ.ನಾಗಮೋಹನ್ ದಾಸ್ ವರದಿ ಯಥಾವತ್ತ್ ಜಾರಿ; ಶಾಸಕ ಜ್ಯೋತಿಗಣೇಶ್ ಭರವಸೆ

1 min read

ಶ್ರೀ ಮಹರ್ಷಿ ವಾಲ್ಮೀಕಿ ಜಗತ್ತಿನ ಪ್ರಥಮ ದಾರ್ಶನಿಕ: ಶಾಸಕ ಜಿ.ಬಿ ಜ್ಯೋತಿಗಣೇಶ್

Tumkurnews
ತುಮಕೂರು; ಮಹರ್ಷಿ ವಾಲ್ಮೀಕಿಯು ರಾಮಾಯಣ ಗ್ರಂಥದ ಮೂಲಕ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪ್ರಥಮವಾಗಿ ಪರಿಚಯಿಸಿದ ದಾರ್ಶನಿಕರು ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರಪಾಲಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಗುಬ್ಬಿವೀರಣ್ಣ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ

ಸಾಧಿಸುವ ಮನಸ್ಸಿದ್ದಲ್ಲಿ, ನಾವು ಏನನ್ನಾದರೂ ಸಾಧಿಸಬಹುದು, ಸಾಮಾನ್ಯ ವ್ಯಕ್ತಿಯೊಬ್ಬ ಮಹಾಕಾವ್ಯ ರಚಿಸುವಷ್ಟರ ಮಟ್ಟಿಗೆ ಜ್ಞಾನ ಸಂಪಾದನೆ ಮಾಡಿ, ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗುವ ದಾರಿಯನ್ನು ತೋರಿಸಿಕೊಟ್ಟ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಾಣ ಗ್ರಂಥದ ನೈತಿಕ ಮೌಲ್ಯಗಳು, ಪ್ರತಿ ವ್ಯಕ್ತಿಯ ಜೀವನದಲ್ಲಿ ನಡೆಯುವ ಹಲವು ಘಟನೆಗಳಿಗೆ ಆದರ್ಶಪ್ರಾಯವಾಗಿವೆ ಎಂದರು.
ಪ್ರತಿಯೊಬ್ಬರೂ ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳು, ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು,
ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವಿಂದು ಸಾಗಬೇಕಿದೆ, ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ಆಯೋಗ ನೀಡಿರುವ ವರದಿಯನ್ನು ಯಥಾವತ್ತಾಗಿ ಸದ್ಯದಲ್ಲೇ ಜಾರಿಗೆ ತರಲಿದೆ. ಎಸ್.ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಮತ್ತು ಎಸ್.ಟಿ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಲಾಗುತ್ತದೆ, ಇಂತಹ ದಿಟ್ಟ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನಾರ್ಹರು ಎಂದು ತಿಳಿಸಿದರು.

ಹಲವು ನಾಯಕರು ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ; ಬಿ.ಎಸ್.ವೈ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಒ ಕೆ. ವಿದ್ಯಾಕುಮಾರಿ, ರಾಮಾಯಣ ಮಹಾಕಾವ್ಯವು ಎಲ್ಲಾ ಕಾಲಘಟ್ಟ, ಪೀಳಿಗೆಗೆ ಅನ್ವಯವಾಗುತ್ತದೆ. ವಾಲ್ಮೀಕಿ ಮಹರ್ಷಿಯವರ ಹೆಸರೇ ಎಲ್ಲರಿಗೂ ಪ್ರೇರಣದಾಯಕ ಎಂದರು.
ಜಿಲ್ಲಾ ನಾಯಕ ಮಹಿಳಾ ಸಮಾಜದ ಅಧ್ಯಕ್ಷೆ ಎಸ್.ಆರ್ ಶಾಂತಲಾ ರಾಜಣ್ಣ ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಜಿಲ್ಲೆಗೆ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿನಿ ಕು.ಲೇಖನ ಎನ್, ಇವರಿಗೆ ಒಂದು ಲಕ್ಷ ಬಹುಮಾನ ಮಂಜೂರಾತಿ ಪತ್ರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು, ಹಾಗೂ ಜನಪದ, ದಾಸ ಸಾಹಿತ್ಯದ ಗೀತೆಗಳ ಗಾಯನ ಸಭಿಕರ ಗಮನ ಸೆಳೆಯಿತು.

ಯೋಧರ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಚೀನಾದ ವಸ್ತುಗಳನ್ನು ತಿರಸ್ಕರಿಸಿ; ಜ್ಯೋತಿಗಣೇಶ್ ಕರೆ
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಡಿಡಿಪಿಐ ಸಿ.ನಂಜಯ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ.ಶ್ರೀಧರ್, ಜಿಲ್ಲಾ ಪರಿಶಿಷ್ಟ ಪಂಗಡಗಳ ವ್ಯವಸ್ಥಾಪಕ ಶ್ರೀನಿವಾಸ್ ಎಚ್, ತಹಸೀಲ್ದಾರ್ ಮೋಹನ್ ಕುಮಾರ್, ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅಖಿಲ ಕರ್ನಾಟಕ ವಾಲ್ಮೀಕಿ ಸೇನೆ ರಾಜ್ಯ ಅಧ್ಯಕ್ಷ ಪ್ರತಾಪ್ ಮದಕರಿ, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್.ಜಿ ಪುರುಷೋತ್ತಮ, ಸಮುದಾಯದ ಮುಖಂಡರು, ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಸಂಘಟನೆಯ ಪಧಾಧಿಕಾರಿಗಳು ಹಾಗೂ ಮಹರ್ಷಿ ವಾಲ್ಮೀಕಿಯ ಅಭಿಮಾನಿಗಳು ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

About The Author

You May Also Like

More From Author

+ There are no comments

Add yours