ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ
Tumkurnews
ತುಮಕೂರು; ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರ ಸಮ್ಮಾನ್ ಯೊಜನೆ ಹಾಗೂ ವಿದ್ಯುತ್ ಮಗ್ಗ ಸಮೀಕ್ಷೆಯಲ್ಲಿ ಗುರುತಿಸಿರುವ ನೇಕಾರರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಪಿಯುಸಿ, ಐಟಿಐ, ಡಿಪ್ಲೊಮೋ, ಎಲ್ಲಾ ಪದವಿ, ಎಲ್.ಎಲ್.ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್, ವೃತ್ತಿಪರ ಕೋರ್ಸ್, ಎಂ.ಬಿ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‌ಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ(SSP)ದಲ್ಲಿ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದ್ದು, ನೇಕಾರರ ಮಕ್ಕಳನ್ನು ಗುರುತಿಸುವ ಸಲುವಾಗಿ ಸೇವಾ ಸಿಂಧು ತಂತ್ರಾಂಶದ ಕರ್ನಾಟಕ ಒನ್, ಗ್ರಾಮ ಒನ್‍ನಲ್ಲಿ ಲಭ್ಯವಿರುತ್ತದೆ.
ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ತುಮಕೂರು.
ದೂರವಾಣಿ ಸಂಖ್ಯೆ: 0816-2275370ಯನ್ನು ಸಂರ್ಪಕಿಸಬಹುದಾಗಿದೆ.
+ There are no comments
Add yours