ಉದ್ಯೋಗ ಮೇಳ
Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿಕೇಂದ್ರ ಹಾಗೂ ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಇವರ ಸಹಯೋಗದಲ್ಲಿ ಅ.21ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ.
ಉದ್ಯೋಗ ಮೇಳವು ನಗರದ ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದೆ. ಮೇಳದಲ್ಲಿ ಬೆಂಗಳೂರು ಮತ್ತು ತುಮಕೂರಿನ ಹೆಸರಾಂತ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಯಾವುದೇ ಪದವಿ, ಬಿ.ಇ., ಎಂ.ಸಿ.ಎ, ಎಂಬಿ.ಎ. ಹಾಗೂ ಇನ್ನಿತರ ಸ್ನಾತಕೋತ್ತರ ಪದವಿ ಮತ್ತು ಐಟಿಐ, ಡಿಪ್ಲೊಮಾ(ಎಲ್ಲಾ ಟ್ರೇಡ್) ಪಾಸಾದ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರ ಹಾಗೂ ಗುರುತಿನ ಚೀಟಿಯೊಂದಿಗೆ ಭಾಗವಹಿಸಬಹುದು.
ಮೇಳದಲ್ಲಿ 18 ರಿಂದ 35 ವರ್ಷದೊಳಗಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತರು www.ncs.gov.in ವೆಬ್ ಪೋರ್ಟಲ್‍ನಲ್ಲಿ ಉದ್ಯೋಗಾಕಾಂಕ್ಷಿಯಾಗಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0816-2278488, ಮೊ.ಸಂ. 9945751254, 9901734592, 8123282455, 8792669410 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours