ಜಾನುವಾರುಗಳಲ್ಲಿ ಚರ್ಮಗಂಟು ರೋಗ; ಜಾನುವಾರ ಸಂತೆ, ಜಾತ್ರೆ, ಮಾರುಕಟ್ಟೆ, ಸಾಗಾಣಿಕೆ ನಿಷೇಧ
Tumkurnews
ತುಮಕೂರು; ಜಿಲ್ಲೆಯ ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ತಿಪಟೂರು, ತುಮಕೂರು, ಕುಣಿಗಲ್ ಮತ್ತು ತುರುವೇಕೆರೆ ತಾಲ್ಲೂಕುಗಳ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದೆ. ಈ ರೋಗವು ವ್ಯಾಪಕವಾಗಿ ಹರಡುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಜಾನುವಾರುಗಳ ಸಂತೆ, ಜಾತ್ರೆ, ಮಾರುಕಟ್ಟೆ, ಸಾಗಾಣಿಕೆಯನ್ನು ಮುಂದಿನ ಆದೇಶದವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಚರ್ಮಗಂಟು ರೋಗವು ಹರಡಿರುವುದು ದೃಢಪಟ್ಟಿರುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಜಾನುವಾರುಗಳ ಸಂತೆ, ಜಾತ್ರೆ, ಮಾರುಕಟ್ಟೆಗಳನ್ನು ಮುಂದೂಡುವುದು ಹಾಗೂ ಜಾನುವಾರುಗಳ ಸಾಗಾಣಿಕೆಯನ್ನು ನಿಷೇಧಿಸುವುದು ಅವಶ್ಯಕವಾಗಿದೆ ಎಂದು ಮನಗಂಡು ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
+ There are no comments
Add yours