Tumkurnews
ತುಮಕೂರು; ತಂದೆ ಬುದ್ದಿವಾದ ಹೇಳಿದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ತಾಲ್ಲೂಕಿನಲ್ಲಿ ನಡೆದಿದೆ.
ಕುಣಿಗಲ್ ತಾಲ್ಲೂಕಿನ ಗಂಗೇನಹಳ್ಳಿ ಗ್ರಾಮದ ಸುಹೇಲ್ ಖಾನ್ (21) ಮೃತ ದುರ್ದೈವಿ.
ಮನೆಯಲ್ಲೇ ಇದ್ದ ಸುಹೇಲ್’ಗೆ ಅಡಕೆ ಕೀಳುವ ಕೆಲಸಕ್ಕೆ ಹೋಗುವಂತೆ ತಂದೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವಕ ಗ್ರಾಮದ ಗಂಗಣ್ಣ ಎಂಬುವರ ಅಡಕೆ ತೋಟಕ್ಕೆ ಹೋಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಷ ಸೇವಿಸಿ ತೀವ್ರ ಅಸ್ವಸ್ಥನಾಗಿದ್ದ ಯುವಕನನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತುಮಕೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
+ There are no comments
Add yours