ಕೊಡಿ ಬಿದ್ದ ಕುಂಬಾರಹಳ್ಳಿ ಕೆರೆ; ಮಾಜಿ ಶಾಸಕ ಬಿ ಸುರೇಶ್ ಗೌಡ ಬಾಗಿನ ಅರ್ಪಣೆ
Tumkurnews
ತುಮಕೂರು; ತಾಲ್ಲೂಕಿನ ಅರೆಗುಜ್ಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುರ್ಗದ ಹಳ್ಳಿ ಮಜುರೆ ಕುಂಬಾರಳ್ಳಿ ಕೆರೆಯು 30 ವರ್ಷಗಳ ನಂತರ ತುಂಬಿ ಕೋಡಿ ಹರಿದಿದೆ. ಈ ಹಿನ್ನೆಲೆಯಲ್ಲಿ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ ಗೌಡ ಬಾಗಿನ ಅರ್ಪಿಸಿದರು.
ಸಂಪ್ರದಾಯದಂತೆ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಅರಿಶಿಣ, ಕುಂಕುಮ, ಬಳೆ, ಸೀರೆ ವಿತರಣೆ ಮಾಡಲಾಯಿತು. ಇದರ ಜೊತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಯಿತು.
ನಂತರ ಬಿ. ಸುರೇಶ್ ಗೌಡ ಮಾತನಾಡಿ, ತುಂಬಿದ ಕೆರೆ ಕಟ್ಟೆಗಳಿಗೆ ಕೃತಜ್ಞತೆ ಅರ್ಪಣೆ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಹಿಂದೂ ಸಂಸ್ಕೃತಿಯಾಗಿದೆ. ಮನುಷ್ಯನ ಬದುಕಿನಲ್ಲಿ ಜೀವದ ನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ತುಂಬಿರಲಿ, ತುಂಬಿರುವ ಕೆರೆಗಳನ್ನು ಪೂಜಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ, ಪ್ರತಿ ವರ್ಷ ಕೆರೆಗಳು ತುಂಬುವ ಮೂಲಕ ರೈತರಿಗೆ ದಯೆ ತೋರಲಿ ಎಂದು ಪ್ರಾರ್ಥಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಶಂಕರ್, ರವಿ, ಎಸ್.ಸಿದ್ದರಾಜು, ಕರಿಯಪ್ಪ, ನಾರಾಯಣ, ಅಪ್ಪಯಣ್ಣ ನಾಗರಾಜು ಹಿರಿಯ ಮುಖಂಡರು ಕಾರ್ಯಕರ್ತರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಉಪಸ್ಥಿತರಿದ್ದರು.
+ There are no comments
Add yours