ತುಮಕೂರು; ಅ.23ರಂದು ಕಾರ್ಮಿಕರ ಬೃಹತ್ ಸಮಾವೇಶ

1 min read

 

Tumkurnews
ತುಮಕೂರು; ರಾಜ್ಯಾದ್ಯಂತ 1.81 ಕೋಟಿ ಅಸಂಘಟಿತ ಕಾರ್ಮಿಕರು 101 ವಲಯಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ಇದೆ ಅ.23ರ ಭಾನುವಾರ ತುಮಕೂರಿನ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಾರ್ಮಿಕರ ಸಮಾವೇಶ ನಡೆಯಲಿದೆ ಎಂದು ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ಬಿ. ದೇವರಾಜ್ ತಿಳಿಸಿದರು.
ನಗರದ ಎಸ್‍ಐಟಿ ಮುಖ್ಯರಸ್ತೆಯ ಖಾಸಗಿ ಹೋಟೆಲ್’ನಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ದೇಶದಲ್ಲಿ ಕಾರ್ಮಿಕರು ಮತ್ತು ರೈತರು ಎರಡು ಕಣ್ಣುಗಳು ಇದ್ದ ಹಾಗೆ. ಮಾಧ್ಯಮವು ಕೂಡ ಅಸಂಘಟಿತ ವಲಯಕ್ಕೆ ಸೇರುತ್ತಿದ್ದು, ಸರ್ಕಾರದ ಯಾವುದೇ ಫಲಾಪೇಕ್ಷೆಗಳಿಲ್ಲದೆ ದುಡಿಯುತ್ತಿದ್ದು, ಇವರೆಲ್ಲದರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಒಂದೆಡೆ ಸೇರುವ ಸಲುವಾಗಿ ಸಮಾವೇಶ ನಡೆಯುತ್ತಿದೆ ಎಂದು ಬಿ.ದೇವರಾಜು ತಿಳಿಸಿದರು.
ಒಟ್ಟು 32 ವಲಯಗಳಲ್ಲಿ ಕಟ್ಟಡ ಕಾರ್ಮಿಕರು ರಾಜ್ಯಾದ್ಯಂತ ಕಾರ್ಯನಿರ್ವಹಣೆ ಮಾಡುತ್ತಿದ್ದು, ಸರ್ಕಾರ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ ಸೌಲಭ್ಯಗಳು ತಲುಪಿಸುವ ನಿಟ್ಟಿನಲ್ಲಿ ಕಾರ್ಮಿಕರ ಕುರಿತಾಗಿ ವಿವಿಧ ಬೇಡಿಕೆಗಳನ್ನು ಸಮಾವೇಶದಲ್ಲಿ ಸಚಿವರು ಮತ್ತು ಇಲಾಖೆ ಸಲ್ಲಿಸಲಾಗುವುದು.

ಕೌಟುಂಬಿಕ ಕಲಹ; ಪತ್ನಿ ಹಾಗೂ ಮಗುವನ್ನು ಭೀಕರವಾಗಿ ಹತ್ಯೆ ಮಾಡಿದ ಪತಿ
ತುಮಕೂರು ಜಿಲ್ಲೆಯಲ್ಲಿ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಟ್ಟಡ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದು, ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ರಾಜ್ಯ ಸಂಘಟನೆಯ ಪ್ರಚಾರ ವಾಹನದಲ್ಲಿ ಕಾರ್ಮಿಕರಿಗೆ ಕರಪತ್ರಗಳ ಮೂಲಕ ಸೌಲಭ್ಯಗಳ ಕುರಿತು ಪ್ರಚಾರ ನಡೆಸಲಾಗುವುದು ಎಂದು ತಿಳಿಸಿದರು.

ಭಾನುವಾರ ನಡೆಯಲಿರುವ ಸಮಾವೇಶದಲ್ಲಿ 3 ಸಾವಿರ ಕಾರ್ಮಿಕರನ್ನು ಸೇರಿಸುವ ನಿರೀಕ್ಷೆ ಹೊಂದಲಾಗಿದ್ದು, ಸಮಾವೇಶಕ್ಕೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂಪಾಷ ಸೇರಿದಂತೆ ಇಲಾಖೆಯ ಇತರೆ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಕಾರ್ಮಿಕ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಕಾರ್ಮಿಕರ ದುರ್ಮರಣ; ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಪಡೆಯುವ ಸಲುವಾಗಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಎಲ್ಲ ವಲಯದ ಕಾರ್ಮಿಕರಿಗೆ ಬಜೆಟ್’ನಲ್ಲಿ ಹಣ ಮೀಸಲಿಡಬೇಕು ಎಂದು ಸಂಘಟನೆಗಳು ಬೇಡಿಕೆ ಇಟ್ಟಿದ್ದು, ಸರ್ಕಾರ ಎಲ್ಲಾ ವಲಯದಿಂದ ಸಂಗ್ರಹವಾಗುವ ಸೆಸ್ ಹಣದಲ್ಲಿ ಕಾರ್ಮಿಕರಿಗೆ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು ಇದರ ಬಗ್ಗೆ ನಮ್ಮ ಸಂಘಟನೆ ಅರಿವು ಮೂಡಿಸಲು ಹೊರಟಿದೆ ಎಂದು ತಿಳಿಸಿದರು.
ರಾಜ್ಯ ಕಾರ್ಯಾಧ್ಯಕ್ಷ ಆರ್.ಶ್ರೀನಿವಾಸ್ ಮಾತನಾಡಿ, ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರನ್ನು ಸಂಘಟಿಸುವ ಸಲುವಾಗಿ ಜಿಲ್ಲಾ ಮಟ್ಟದ ಸಮಾವೇಶಗಳನ್ನು ಮಾಡಿಕೊಂಡು ಬರುತ್ತಿದೆ. ಈ ಬಾರಿ ಕಲ್ಪತರು ನಾಡಿನಲ್ಲಿ ಕಟ್ಟಡ ಕಾರ್ಮಿಕರಿಗೆ ಒಗ್ಗೂಡಿಸುವ ಸಲುವಾಗಿ ಸಮಾವೇಶ ಆಯೋಜನೆ ಮಾಡಲಾಗಿದ್ದು, ಕಾರ್ಮಿಕ ಸಚಿವರ ಆದೇಶದಂತೆ ಕಾರ್ಮಿಕರು ಇರುವ ಸ್ಥಳಗಳಲ್ಲಿ ಸಮಾವೇಶಗಳನ್ನು ನಡೆಸುತ್ತಿದ್ದು ಕಾರ್ಮಿಕ ಕಾನೂನಿನ ಬಗ್ಗೆ ಅವರಿಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ತುಮಕೂರಿನಲ್ಲಿ ರಾಜ್ಯಮಟ್ಟದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ಸಮ್ಮೇಳನ
ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷ ಎಸ್.ಡಿ ನಾಗರಾಜ್ ಸಿದ್ದನಕಟ್ಟೆ ಮಾತನಾಡಿ, ಭಾನುವಾರ ನಡೆಯಲಿರುವ ಜಿಲ್ಲಾ ಮಟ್ಟದ ಕಾರ್ಮಿಕರ ಸಮಾವೇಶಕ್ಕೆ ಅನೇಕ ಗಣ್ಯರು ಅಧಿಕಾರಿಗಳು ಭಾಗಿಯಾಗುತಿದ್ದು, ಜಿಲ್ಲೆಯ 10 ತಾಲೂಕುಗಳಿಂದಲೂ ಕಟ್ಟಡ ಕಾರ್ಮಿಕರು ಆಗಮಿಸುತ್ತಾರೆ. ಈ ಸಮಾವೇಶದಲ್ಲಿ 60 ವರ್ಷ ಮೇಲ್ಪಟ್ಟ ಕಟ್ಟಡ ಕಾರ್ಮಿಕರಿಗೆ ಗೌರವಾರ್ಥ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಮತ್ತು ಕಟ್ಟಡ ಕಾರ್ಮಿಕರ ಮಕ್ಕಳು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ 85ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಗುವುದು ಎಂದು ತಿಳಿಸಿದರು.

About The Author

You May Also Like

More From Author

+ There are no comments

Add yours