ನೇಕಾರರ ಒಕ್ಕೂಟದ ರಾಜ್ಯ ಸಮಾವೇಶ; ತುಮಕೂರಿನಲ್ಲಿ ಭರದ ಸಿದ್ಧತೆ

1 min read

 

ನೇಕಾರರ ಒಕ್ಕೂಟದ ರಾಜ್ಯ ಸಮಾವೇಶ ತುಮಕೂರಿನಲ್ಲಿ

Tumkurnews
ತುಮಕೂರು; ನವೆಂಬರ್ 13ರಂದು ನಗರದ ಮಹಾವೀರ ಕಲ್ಯಾಣ ಮಂಟಪದಲ್ಲಿ ನೇಕಾರರ ಒಕ್ಕೂಟದ ರಾಜ್ಯ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನೇಕಾರರ ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎಸ್ ಸೋಮಶೇಖರ್ ಹಾಗೂ ಒಕ್ಕೂಟದ ಪದಾಧಿಕಾರಿಗಳು ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಕಚೇರಿಯಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಸಿದರು.

ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ಎಸ್ ಸೋಮಶೇಖರ್, ನವೆಂಬರ್ 13 ರಂದು ತುಮಕೂರು ನಗರದಲ್ಲಿ ನೇಕಾರರ ರಾಜ್ಯ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಇದು ರಾಜ್ಯ ಸಮಾವೇಶ ಆದ ಕಾರಣ ಇಡೀ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಸಮಾವೇಶ ಯಶಸ್ವಿಗೊಳಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ನಮ್ಮೊಂದಿಗೆ ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ, ತುಮಕೂರು ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟ ಸಹ ಕೈಜೊಡಿಸಿದೆ. ಇದೇ ಮೊದಲ ಬಾರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ. ಇದು ಭವಿಷ್ಯದಲ್ಲಿ ನಮ್ಮ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಲು ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂಬುದು ಒಕ್ಕೂಟದ ಆಶಯವಾಗಿದೆ ಎಂದರು.

ಜವಳಿ ಘಟಕ ತೆರೆಯಲು ಸಹಾಯಧನ; ಅರ್ಜಿ ಆಹ್ವಾನ
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ಮಾತನಾಡಿ, ರಾಜ್ಯದಲ್ಲಿ ನೇಕಾರರ ಕಷ್ಟ ಸುಖಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನೇಕಾರರ ಒಕ್ಕೂಟ ಸಕ್ರಿಯವಾಗಿ ತೊಡಗಿದೆ. ಎಲ್ಲಾ ನೇಕಾರ ಸಮುದಾಯಗಳನ್ನು ಒಂದು ವೇದಿಕೆಗೆ ತಂದು, ರಾಜಕೀಯ, ಅರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ದಿ ಹೊಂದುವ ನಿಟ್ಟಿನಲ್ಲಿ ನವೆಂಬರ್ 13 ರಂದು ನಡೆಯುವ ಈ ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ರಾಜ್ಯ ಸಮಾವೇಶ ಮತ್ತು ಪ್ರತಿಭಾಪುರಸ್ಕಾರ ಮಹತ್ವದ ಮೈಲಿಗಲ್ಲಾಗಿದೆ. ನಮ್ಮ ರಾಜ್ಯಾಧ್ಯಕ್ಷ ಬಿ.ಎಸ್ ಸೋಮಶೇಖರ್ ಹಾಗೂ ಪದಾಧಿಕಾರಿಗಳು ಕಳೆದ ಒಂದು ತಿಂಗಳಿನಿಂದ ಸಮಾವೇಶದ ಯಶಸ್ವಿಗಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಅವರೊಂದಿಗೆ ನಾವು ಸಹ ಕೈಜೋಡಿಸಿ, ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ತಿಳಿಸಿದರು.

ನ್ಯಾ.ನಾಗಮೋಹನ್ ದಾಸ್ ವರದಿ ಯಥಾವತ್ತ್ ಜಾರಿ; ಶಾಸಕ ಜ್ಯೋತಿಗಣೇಶ್ ಭರವಸೆ
ಇದೇ ವೇಳೆ ರಾಜ್ಯಾಧ್ಯಕ್ಷ ಬಿ.ಎಸ್ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ತೋಟಪ್ಪ ಶೇಖರ್ ಖಜಾಂಚಿ ನವೀನ್ ಚಿಲ್ಲಾಳ, ಕಚೇರಿ ಕಾರ್ಯದರ್ಶಿ ದಯಾನಂದ ಶೆಟ್ಟಿಗಾರ್ ಅವರನ್ನು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಅಭಿನಂದಿಸಲಾಯಿತು. ನೇಕಾರರ ಸಮುದಾಯಗಳ ಒಕ್ಕೂಟದ ತುಮಕೂರು ಜಿಲ್ಲಾ ಶಾಖೆ ಕಾರ್ಯದರ್ಶಿ ರಾಮಕೃಷ್ಣಪ್ಪ, ಉಪಾಧ್ಯಕ್ಷ ಕರಿಯಪ್ಪ, ಯೋಗಾನಂದ, ಗಂಗಾಧರ್, ಶಂಕರಪ್ಪ, ನರಸಿಂಹಮೂರ್ತಿ, ಸಂಘಟನಾ ಕಾರ್ಯದರ್ಶಿ ಅನಿಲ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರತಿಭಾವಂತ ವಿದ್ಯಾರ್ಥಿನಿಗೆ ಉಚಿತವಾಗಿ ಲ್ಯಾಪ್‍ಟಾಪ್ ಕೊಡಿಸಿದ ಬಿಜೆಪಿ ಕಾರ್ಪೋರೇಟರ್

About The Author

You May Also Like

More From Author

+ There are no comments

Add yours