ಬಾಣಂತಿ, ಅವಳಿ ಮಕ್ಕಳ ಸಾವು; ನಾಲ್ವರ ಅಮಾನತು
Tumkurnews
ತುಮಕೂರು; ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ನಿರಾಕರಿಸಿದ ಕಾರಣ ತಾಯಿ ಮತ್ತು ಅವಳಿ ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ವೈದ್ಯೆ, ಮೂವರು ನರ್ಸ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ.
ಘಟನೆ ಬೆನ್ನಲ್ಲೇ ಗುರುವಾರ ರಾತ್ರಿ ಆರೋಗ್ಯ ಸಚಿವ ಡಾ.ಸುಧಾಕರ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪ್ರಕರಣದ ಮಾಹಿತಿ ಪಡೆದುಕೊಂಡರು. ಬಳಿಕ ಆಧಾರ್ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂದು ಗರ್ಭಿಣಿಯನ್ನು ಹೆರಿಗೆಗೆ ದಾಖಲಿಸಿಕೊಳ್ಳದೇ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಜಿಲ್ಲಾಸ್ಪತ್ರೆಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಉಷಾ ಎ.ಆರ್., ನರ್ಸ್’ಗಳಾದ ಯಶೋಧ ಬಿ.ವೈ, ಸವಿತ, ದಿವ್ಯ ಭಾರತಿ ಇವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿರುವುದಾಗಿ ತಿಳಿಸಿದರು.
ಡಿ.ಎಸ್ ಗೆ ನೋಟೀಸ್; ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಸರ್ಜನ್ ಡಾ.ವೀಣಾಗೆ ಶೋಕಾಸ್ ನೋಟೀಸ್ ನೀಡಲಾಗಿದೆ.
+ There are no comments
Add yours