ಪತ್ರಕರ್ತರಿಗೆ ಉಚಿತ ಟ್ಯಾಬ್; ಅರ್ಜಿ ಆಹ್ವಾನ

1 min read

 

Tumkurnews
ತುಮಕೂರು; ಕರ್ನಾಟಕ ಮಾಧ್ಯಮ ಅಕಾಡೆಮಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಟ್ಯಾಬ್‍ಗಳನ್ನು ನೀಡಲು ಉದ್ದೇಶಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತಿಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿಂದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ ಅರ್ಜಿ ಸಲ್ಲಿಸುವಂತಿಲ್ಲ. ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ. ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು.
ಅಭ್ಯರ್ಥಿಗಳು ಸ್ವಯಂ ಅರ್ಜಿಗಳೊಂದಿಗೆ ಪೂರಕ ದಾಖಲೆಗಳನ್ನು ಇ-ಮೇಲ್ ವಿಳಾಸ: karnatakamediaavademy@gmail.com ಗೆ ಸಲ್ಲಿಸಬೇಕು ಅಥವಾ ಅಂಚೆ ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ನ.10ರೊಳಗಾಗಿ ಅರ್ಜಿಗಳನ್ನು ಕಳುಹಿಸಬಹುದು ಎಂದು ಕಾರ್ಯದರ್ಶಿ ಸಿ. ರೂಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours