ಸತೀಶ್ ಜಾರಕಿಹೊಳಿಯನ್ನ ಪಕ್ಷದಿಂದ ಹೊರಹಾಕಿ; ಗೃಹ ಸಚಿವ
Tumkurnews
ತುಮಕೂರು; ಕಾಂಗ್ರೆಸ್ ಪಕ್ಷವೇ ಒಂದು ಅಶ್ಲೀಲ, ಹಿಂದೂ ಧರ್ಮವಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಪದ ಎಂದು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ಸೇ ಒಂದು ಅಶ್ಲೀಲ, ಹಿಂದೂ ಪದ ಅಶ್ಲೀಲವಲ್ಲ ಎಂದರು.
ಇಷ್ಟು ದಿನ ಕಾಂಗ್ರೆಸ್ಸಿಗರು ಹಿಂದೂಗಳನ್ನು ಅವಮಾನ ಮಾಡಿಕೊಂಡು ಅಲ್ಪಸಂಖ್ಯಾತ ಮತ ಪಡೆದುಕೊಂಡು ಅಧಿಕಾರದ ಕುರ್ಚಿ ಮೇಲೆ ಕುಳಿತಿದ್ದರು. ಈಗ ಇಡೀ ರಾಜ್ಯ ಮತ್ತು ದೇಶದ ಜನರಿಗೆ ಗೊತ್ತಾಗಿದೆ. ಕಾಂಗ್ರೆಸ್ಸೇ ಒಂದು ಅಶ್ಲೀಲ ಎಂದು. ಹಾಗಾಗಿ ಜನ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಈಗಾಗಲೇ ಹಿಂದೂಗಳಿಗೆ ಅವಮಾನ ಮಾಡಿದ್ದಕ್ಕೆ ಬೆಲೆ ತೆತ್ತಿದ್ದಾರೆ. ಮುಂದೆಯೂ ಬೆಲೆ ತೆರುತ್ತಾರೆ. ಇನ್ನು 5 ತಿಂಗಳಲ್ಲಿ ಚುನಾವಣೆ ಇದೆ, ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಈ ರೀತಿಯ ವಿವಾದ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ತಾಕತ್ ಇದ್ದರೆ ಸತೀಶ್ ಜಾರಕಿ ಹೋಳಿಯನ್ನು ಪಕ್ಷದಿಂದ ಹೊರಗೆ ಹಾಕಲಿ, ಮಗು ಚಿವುಟೊದು, ತೊಟ್ಟಿಲು ತೂಗೋದು ಎರಡು ಕೆಲಸವನ್ನು ಡಿ.ಕೆ ಶಿವಕುಮಾರ್ ಮಾಡಬಾರದು ಎಂದರು.
ಹಿಂದೂ ಮುಸ್ಲಿಂ ಇಬ್ಬರನ್ನೂ ಒಟ್ಟಿಗೆ ಸೇರಿ ಮುಂದೆ ಹೋಗುವುದಕ್ಕೆ ಇವರು ಬಿಡುತ್ತಿಲ್ಲ. ಪ್ರತ್ಯೇಕವಾಗಿ ಇಡುವಂತಹ ವಿಶೇಷ ಪ್ರಯತ್ನ ಈ ದೇಶದಲ್ಲಿ ನಡೆಯುತ್ತಿದೆ. ಈ ಹಿಂದೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತ್ತು ಮಾಡಲಾಗಿತ್ತು. ಅದೇ ರೀತಿ ಸತೀಶ್ ಜಾರಕಿಹೋಳಿ ಮೇಲೆ ಕ್ರಮ ಕೈಗೊಳ್ಳುವ ಧೈರ್ಯ ಕಾಂಗ್ರೆಸ್ ತೊರಲಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸವಾಲು ಹಾಕಿದರು.
+ There are no comments
Add yours