ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
Tumkurnews
ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಮೆಟ್ರಿಕ್ ಪೂರ್ವ ಕೋರ್ಸು(1ರಿಂದ 10ನೇ ತರಗತಿ)ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗ ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ-1ರ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಭರ್ತಿ ಮಾಡಿದ ಅರ್ಜಿಯೊಂದಿಗೆ ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್-ಐಡಿ(ಸ್ಯಾಟ್ಸ್-ಐಡಿ ತಿಳಿಯಲು ಜಾಲತಾಣ http://sts.Karnataka.gov.in ಸಂಪರ್ಕಿಸಬಹುದಾಗಿದೆ.), ವಿದ್ಯಾರ್ಥಿ ಹಾಗೂ ಪೋಷಕರ ಆಧಾರ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಆರ್.ಡಿ.ಸಂಖ್ಯೆ, ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿನಿಲಯ ಪ್ರವೇಶ ಸಂಖ್ಯೆ, ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ, ಆಧಾರ್ ಸಂಖ್ಯೆ ಇಲ್ಲದಿದ್ದಲ್ಲಿ ಆಧಾರ್ ನೋಂದಣಿ ಮಾಡಿಸಿದ ಇಐಡಿ ಸಂಖ್ಯೆ, ಐಎಫ್‍ಎಸ್‍ಸಿ ಸಂಖ್ಯೆ ಹಾಗೂ ಬ್ಯಾಂಕಿನ ವಿಳಾಸ ಸೇರಿದಂತೆ ಬ್ಯಾಂಕ್ ಖಾತೆ ಸಂಖ್ಯೆ, ಪೋಷಕರ ಆಧಾರ್ ನಂಬರಿಗೆ ಲಿಂಕ್ ಮಾಡಿರುವ ಮೊಬೈಲ್ ನಂಬರ್ ಹಾಗೂ ಭೌತಿಕ ಅನುಮತಿ ಪತ್ರವನ್ನು ಲಗತ್ತಿಸಬೇಕು.
ಕುಟುಂಬದ ವಾರ್ಷಿಕ ಆದಾಯಮಿತಿ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2.50ಲಕ್ಷ ರೂ., ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 1ಲಕ್ಷ ರೂ., ಪ್ರವರ್ಗ-2ಎ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳಿಗೆ 44,500 ರೂ.ಗಳಿಗೆ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಡಿಸೆಂಬರ್ 31ರೊಳಗಾಗಿ ಜಾಲತಾಣ http://SSP.Karnataka.gov.in ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ http://bcwd.Karnataka.gov.in ಅಥವಾ ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
+ There are no comments
Add yours