ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು
Tumkurnews
ತುಮಕೂರು; ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯ ಮುದಿಗೆರೆ ಗೇಟ್ ಬಳಿ ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾತ್ರಿ ಸುಮಾರು 10:30ರ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಅಥವಾ ಸ್ವಯಂ ಅಪಘಾತದಲ್ಲಿ ಬೈಕ್ ಸವಾರರು ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮೃತ ದೇಹಗಳನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
+ There are no comments
Add yours