ಪ್ರತ್ಯೇಕ ಅಪಘಾತ; ಜಿಲ್ಲೆಯಲ್ಲಿ ನಾಲ್ವರು ಸಾವು

1 min read

Tumkurnews
ತುಮಕೂರು; ಜಿಲ್ಲೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ನಡೆದಿದೆ.
ತುಮಕೂರು ನಗರದ ಹೊರಪೇಟೆಯ ಕೆಇಬಿ ಕಾಂಪೌಂಡ್ ಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ದೀಪು(36) ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಚಾಲಕ ಖಾಸಿಂ(25) ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಗಾಯಗೊಂಡಿರುವ ಮಂಜುನಾಥ್(22) ಎಂಬಾತನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಬ್ಬರು ಸಾವು; ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯ ಮುದಿಗೆರೆ ಗೇಟ್ ಬಳಿ ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾತ್ರಿ ಸುಮಾರು 10:30ರ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಯಾವುದೋ‌ ಅಪರಿಚಿತ ವಾಹನ ಡಿಕ್ಕಿಯಾಗಿ ಅಥವಾ ಸ್ವಯಂ ಅಪಘಾತದಲ್ಲಿ ಬೈಕ್ ಸವಾರರು ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮೃತರನ್ನು ಹೊನ್ನಶೆಟ್ಟಿಹಳ್ಳಿಯ ಎಂದು ಗುರುತಿಸಲಾಗಿದ್ದು, ಮತ್ತೋರ್ವನ ವಿವರ ತಿಳಿದು ಬಂದಿಲ್ಲ. ಮೃತ ದೇಹಗಳನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

About The Author

You May Also Like

More From Author

+ There are no comments

Add yours