ಅಮೃತ್ತೂರು ಹೆಡ್ ಕಾನ್ಸ್‌ಟೇಬಲ್ ಅಮಾನತುಗೊಳಿಸಿ ಎಸ್.ಪಿ ಆದೇಶ
Tumkurnews
ತುಮಕೂರು; ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಅಮೃತ್ತೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಕೇಶವ ನಾಯ್ಕ್’ನನ್ನು ಅಮಾನತುಗೊಳಿಸಿ ಎಸ್.ಪಿ ರಾಹುಲ್ ಕುಮಾರ್ ಶಹಪುರವಾಡ್ ಆದೇಶಿಸಿದ್ದಾರೆ.
ಅಮಾನತುಗೊಂಡಿರುವ ಕೇಶವನಾಯ್ಕ್, ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದಿದ್ದ ವ್ಯಕ್ತಿಯೋರ್ವನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಿತ್ರ ಹಿಂಸೆ ನೀಡುವ ಬೆದರಿಕೆ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.
+ There are no comments
Add yours