ತುಮಕೂರು ಆರೋಗ್ಯ ಕ್ಷೇತ್ರಕ್ಕೆ 76 ಕೋಟಿ ಮಂಜೂರು; ಕೆ.ಪಿ ಮಹೇಶ ಅಭಿನಂದನೆ
Tumkurnews
ತುಮಕೂರು; ಸಾರ್ವಜನಿಕರ ಆರೋಗ್ಯ, ಸುರಕ್ಷೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ದೃಷ್ಠಿಯಿಂದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಎನ್‍ಎಚ್‍ಎಂ ಫಂಡ್‍ನಿಂದ ತುಮಕೂರಿಗೆ 76 ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸರ್ಕಾರದ ಈ ಕೊಡುಗೆ ಅಭಿನಂದನಾರ್ಹ ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೆ.ಪಿ ಮಹೇಶ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸಚಿವ ಸಂಪುಟದ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಂಧರ್ಭದಲ್ಲಿ, ತುಮಕೂರಿನಲ್ಲಿ 55 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆ ಸಾಮರ್ಥ್ಯವುಳ್ಳ ತೀವ್ರ ನಿಗಾ ಘಟಕ (ಕ್ರಿಟಿಕಲ್ ಕೇರ್ ಆಸ್ಪತ್ರೆ) ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜ್ ಮತ್ತು ಹಾಸ್ಟೆಲ್ ನಿರ್ಮಾಣಕ್ಕೆ 120 ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ.
+ There are no comments
Add yours