ದೊಡ್ಡೇರಿ ಹೋಬಳಿಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
Tumkurnews
ತುಮಕೂರು; ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಗಿಡದಾಗಲಹಳ್ಳಿಯಲ್ಲಿ ನ.19ರಂದು ನಡೆಯಲಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ’ ಅಭಿಯಾನದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮತ್ತು ಮಧುಗಿರಿ ತಾಲ್ಲೂಕು ತಹಶೀಲ್ದಾರರು ಗಿಡದಾಗಲಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ.
ಅದೇ ದಿನ ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ದುರ್ಗದಹಳ್ಳಿ, ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಹೋಬಳಿ ಹೊರಕೆರೆ ಗ್ರಾಮ, ಕುಣಿಗಲ್ ತಾಲ್ಲೂಕು ಕೊತ್ತಗೆರೆ ಹೋಬಳಿ ದೊಡ್ಡಮಳಲವಾಡಿ ಗ್ರಾಮ, ತಿಪಟೂರು ತಾಲ್ಲೂಕು ನೊಣವಿನಕೆರೆ ಹೋಬಳಿ ನೆಲ್ಲಿಕೆರೆ ಗ್ರಾಮ, ತುರುವೇಕೆರೆ ತಾಲ್ಲೂಕು ದಂಡಿನಶಿವರ ಹೋಬಳಿ ಮಾಚೇನಹಳ್ಳಿ ಗ್ರಾಮ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿ ಬರಗೂರು ಗ್ರಾಮ, ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ವೀರಾಪುರ ಗ್ರಾಮ, ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಬಂದಕುಂಟೆ ಗ್ರಾಮ, ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿ ಕ್ಯಾತಗಾನಕೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮ ನಡೆಯಲಿದ್ದು, ಆಯಾ ತಾಲ್ಲೂಕು ತಹಶೀಲ್ದಾರರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.
+ There are no comments
Add yours