ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ ಅವಧಿ ವಿಸ್ತರಣೆ
Tumkurnews
ತುಮಕೂರು; ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್’ಗಳ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನ.22ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಯನ್ನು ಜಾಲತಾಣ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ತೊಂದರೆಗಳಾದಲ್ಲಿ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದಾಗಿದೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅಥವಾ ದೂ.ವಾ.ಸಂ. 0816-2278014ನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours