ರೈತರಿಗೆ ವೈಜ್ಞಾನಿಕ ಕುರಿ, ಮೇಕೆ, ಕೋಳಿ ಸಾಕಾಣಿಕೆ ಬಗ್ಗೆ ಉಚಿತ ತರಬೇತಿ

1 min read

 

ರೈತರಿಗೆ ವಿವಿಧ ಪಶುಪಾಲನಾ ತರಬೇತಿ

Tumkurnews
ತುಮಕೂರು; ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ರೈತರಿಗೆ ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ಹಾಗೂ ಕೋಳಿ ಸಾಕಾಣಿಕೆಗೆ ಸಂಬಂಧಿಸಿದಂತೆ ಉಚಿತ ತರಬೇತಿ ನೀಡಲಾಗುವುದು.
ಆಸಕ್ತ ರೈತರಿಗೆ ನ.21 ಮತ್ತು 22ರಂದು ಕುರಿ, ಮೇಕೆ ಸಾಕಾಣಿಕೆ ಹಾಗೂ ನ.24 ಮತ್ತು 25ರಂದು ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು 2 ಪಾಸ್ ಪೋರ್ಟ್ ಅಳತೆ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು.
ಆಸಕ್ತ ರೈತರು ತರಬೇತಿಗಾಗಿ ನಗರದ ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ದೂ.ವಾ.ಸಂ. 0816-2251214ನ್ನು ಸಂಪರ್ಕಿಸಬಹುದು ಎಂದು ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours