ಕೊರಟಗೆರೆಯಲ್ಲಿ ಕುಂದುಕೊರತೆ ಸಭೆ
Tumkurnews
ತುಮಕೂರು; ಜಿಲ್ಲೆಯ ಕೊರಟಗೆರೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನ.22ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರ ನೇತೃತ್ವದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಕೊರಟಗೆರೆ ತಾಲ್ಲೂಕಿನ 24 ಗ್ರಾಮಪಂಚಾಯತಿ ವ್ಯಾಪ್ತಿಯ ರೈತರು, ಸಾರ್ವಜನಿಕರು ತಮ್ಮ ಕುಂದುಕೊರತೆ, ದೂರುಗಳಿದ್ದಲ್ಲಿ ತಪ್ಪದೇ ಭಾಗವಹಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುಬಹುದಾಗಿದೆ. ಗ್ರಾಮಪಂಚಾಯತಿಗಳಿಂದ ಸಾರ್ವಜನಿಕರು ಹಲವಾರು ದೂರುಗಳೊಂದಿಗೆ ಜಿಲ್ಲಾ ಪಂಚಾಯತಿಗೆ ಆಗಮಿಸುತ್ತಿದ್ದು, ಇದನ್ನು ಸಾಧ್ಯವಾದಷ್ಟು ತಡೆಗಟ್ಟುವ ಸಲುವಾಗಿ ಹಾಗೂ ಸ್ಥಳೀಯವಾಗಿ ದೂರು ಮತ್ತು ಸಮಸ್ಯೆಗಳಿಗೆ ದೂರು ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ.ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours