ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಲಾರಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1 min read

ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಲಾರಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Tumkurnews
ತುಮಕೂರು; ಚಲಿಸುತ್ತಿದ್ದ ಬೈಕ್ ಮೇಲೆ ಲಾರಿ ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ಕುಣಿಗಲ್ ತಾಲ್ಲೂಕಿನಲ್ಲಿ ನಡೆದಿದೆ.
ಕುಣಿಗಲ್ ತಾಲ್ಲೂಕಿನ ನಾಗೇಗೌಡನ ಪಾಳ್ಯದ ಗೇಟ್ ಬಳಿ ಈ ಅವಘಡ ಸಂಭವಿಸಿದ್ದು, ಚಿಕ್ಕ ಮಾವತ್ತೂರು ಗ್ರಾಮದ ಸಂಜಯ್(26) ಮೃತ ದುರ್ದೈವಿ.
ಜಿಪಿ ಡಿಸ್ಟಲರಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಜಯ್, ಕೆಲಸದ ನಿಮಿತ್ತ ತಮ್ಮ ಬೈಕ್’ನಲ್ಲಿ ಎಡೆಯೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಉರುಳಿ ಬಿದ್ದಿದೆ. ಅಮೃತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಉದ್ದಿಮೆ ಸ್ಥಾಪನೆಗೆ 20 ಲಕ್ಷ ಸಾಲ, 10 ಲಕ್ಷ ಸಬ್ಸಿಡಿ; ಇಂದೇ ಅರ್ಜಿ ಸಲ್ಲಿಸಿ

About The Author

You May Also Like

More From Author

+ There are no comments

Add yours