KSRTC ಬಸ್ ಮತ್ತು ಬೈಕ್ ನಡುವೆ ಅಪಘಾತ; ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಸಾವು
Tumkurnews
ತುಮಕೂರು; ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ
ಚಿಕ್ಕೋನಹಳ್ಳಿ ಗೇಟ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ತುರುವೇಕೆರೆಯಿಂದ ಮಾಯಸಂದ್ರಕ್ಕೆ ಹೋಗುವ ಮಾರ್ಗ ಮಧ್ಯೆ ಚಿಕ್ಕೋನಹಳ್ಳಿ ಗೇಟ್ ಬಳಿ ಈ ರಸ್ತೆ ಅಪಘಾತವಾಗಿದ್ದು, ತುರುವೇಕೆರೆ ಪಟ್ಟಣದ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ(ITI) ವ್ಯಾಸಂಗ ಮಾಡುತ್ತಿದ್ದ ಶಶಿಧರ್(19) ಮೃತ ದುರ್ದೈವಿ.
ಮೃತ ಯುವಕ ಪರೀಕ್ಷೆ ಬರೆಯಲು ತನ್ನ ದ್ವಿಚಕ್ರವಾಹನದಲ್ಲಿ ಕಾಲೇಜಿಗೆ ತೆರಳುತ್ತಿದ್ದನು. ಆತನ ಸ್ವಗ್ರಾಮವಾದ ಮುದಿಗೆರೆ ಪಾಳ್ಯದಿಂದ ಹೊರಟು ರಾಷ್ಟ್ರೀಯ ಹೆದ್ದಾರಿ 150 ಎ ರಸ್ತೆಗೆ ಸಂಪರ್ಕ ಕಲ್ಪಿಸುವ ಚಿಕ್ಕೋನಹಳ್ಳಿ ಗೇಟ್ ಬಳಿ passion pro ಬೈಕ್’ನಲ್ಲಿ ತೆರಳುತ್ತಿದ್ದನು. ಆಗ ತುರುವೇಕೆರೆ ಕಡೆಯಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ತಿಪಟೂರು ಘಟಕದ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಬೈಕ್ ನಡುವೆ ಚಿಕ್ಕೋನಹಳ್ಳಿ ಗೇಟ್ ಬಳಿ ಅಪಘಾತವಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಧಾವಿಸಿದ ಶಾಸಕ; ಚಿಕ್ಕೋನಹಳ್ಳಿ ಗೇಟ್ ಸಮೀಪವೇ ತುರುವೇಕೆರೆ ಶಾಸಕ ಮಸಾಲ ಜಯರಾಮ್ ಅವರ ಫಾರಂ ಹೌಸ್ ಇದ್ದು, ವಿಷಯ ತಿಳಿದ ಅವರು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದರು. ಬಳಿಕ ಯುವಕನ ಶವವನ್ನು ತುರುವೇಕೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ, ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ತುರುವೇಕೆರೆ ಪಟ್ಟಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
 
                                             
                                             
                                             
                                             
                                             
                                             
                                             
                                             
                                            
 
                                     
                                     
                                     
                                    


 
                                     
                                     
                                    
+ There are no comments
Add yours