ಸೈಕಲ್’ನಲ್ಲೇ 17 ಜಿಲ್ಲೆ ಕ್ರಮಿಸಿದ KSRTC ನೌಕರರು! ಅರಣ್ಯ ರೋಧನವಾಯ್ತೇ ನೌಕರರ ಕೂಗು?

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಸರ್ಕಾರದ ವಿರುದ್ಧ KSRTC ನೌಕರರ ಸೈಕಲ್ ಸವಾರಿ!; ಅರಣ್ಯ ರೋಧನವಾಯ್ತೇ ಹೋರಾಟ?

Tumkurnews
ತುಮಕೂರು; ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಹೋರಾಟ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಡುತ್ತಿರುವ ಅವರು ಸೈಕಲ್’ನಲ್ಲೇ 17 ಜಿಲ್ಲೆಗಳನ್ನು ಕ್ರಮಿಸಿದ್ದಾರೆ! ಇಷ್ಟಾದರೂ ಸರ್ಕಾರ ನೌಕರರ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ಸಾರಿಗೆ ನೌಕರರ ಸೈಕಲ್ ಸವಾರಿಯ ಹೋರಾಟ ಮುಂದುವರಿಯುತ್ತಲೇ ಇದೆ.

KSRTC; ತುಮಕೂರು ವಿಭಾಗಕ್ಕೆ ಒಂದೇ ದಿನ 1 ಕೋಟಿ ಆದಾಯ!
ಏನಿದು ಸೈಕಲ್ ಹೋರಾಟ?; ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಸರ್ಕಾರ ನೀಡಿರುವ ಭರವಸೆಯಂತೆ ಸರ್ಕಾರಿ ನೌಕರರಂತೆ ಸಮಾನ ವೇತನ ಜಾರಿ ಮಾಡುವುದು, ವೇತನ ಆಯೋಗದ ಮಾದರಿಯಲ್ಲಿ ನೀಡುವುದು ಸೇರಿದಂತೆ ಇತರೆ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಅಕ್ಟೋಬರ್ 10ರಂದು ಬಳ್ಳಾರಿಯಿಂದ ಕೋಲಾರದವರೆಗೆ ಸೈಕಲ್ ಜಾಥಾಗೆ ಚಾಲನೆ ನೀಡಿದೆ. ಈ ಜಾಥಾ ಇದೇ ತಿಂಗಳ 25ರಂದು‌ ಕೋಲಾರ ತಲುಪುತ್ತಿದ್ದು, ಅಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಉದ್ದಿಮೆ ಸ್ಥಾಪನೆಗೆ 20 ಲಕ್ಷ ಸಾಲ, 10 ಲಕ್ಷ ಸಬ್ಸಿಡಿ; ಇಂದೇ ಅರ್ಜಿ ಸಲ್ಲಿಸಿ
ಮಾತು ಮರೆತ ಸರ್ಕಾರ; ಹೋರಾಟದ ನೇತೃತ್ವ ವಹಿಸಿರುವ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್. ಚಂದ್ರಶೇಖರ್, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿನ 1 ಲಕ್ಷ 7 ಸಾವಿರ ಜನರ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.
ಈ ಹಿಂದೆ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ನೀಡುವ ಸವಲತ್ತುಗಳನ್ನು ನೀಡುವುದಾಗಿ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಆಗ ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ನೀಡುವಂತೆ ನೌಕರರು ಬೇಡಿಕೆ ಮುಂದಿಟ್ಟಿದ್ದರು. ಆದರೆ ಈ ಬೇಡಿಕೆ ಈವರೆಗೂ ಈಡೇರಿಲ್ಲ. ಬದಲಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಗದಾಪ್ರಹಾರ ನಡೆಸಿ ಶಿಕ್ಷಿಸಲಾಗಿದೆ. ಕೆಲವರನ್ನು ಸೇವೆಯಿಂದ ವಜಾ ಮಾಡಲಾಗಿದೆ ಎನ್ನುವುದು ಅವರ ಆರೋಪವಾಗಿದೆ.
ಸೈಕಲ್ ಜಾಥಾ ಏಕೆ?; ಸರ್ಕಾರ ನಮ್ಮ ಸಮಸ್ಯೆಗಳನ್ನು ನಿವಾರಣೆ ಮಾಡಿಲ್ಲ. ಕೊಟ್ಟ ಭರವಸೆಯಂತೆ ಸರ್ಕಾರಿ ನೌಕರರಿಗೆ ಸರಿ ಸಮಾನವಾಗಿ ವೇತನ ನೀಡಿಲ್ಲ. ಹೀಗಾಗಿ ನಾಲ್ಕು ನಿಗಮಗಳ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಳೆದ ಅಕ್ಟೋಬರ್ 10 ರಿಂದ ಬಳ್ಳಾರಿಯಿಂದ ಸೈಕಲ್ ಜಾಥಾ ಆರಂಭವಾಗಿದೆ. ಈಗಾಗಲೇ 17 ಜಿಲ್ಲೆಗಳನ್ನು ಕ್ರಮಿಸಿರುವ ಜಾಥಾ ತುಮಕೂರನ್ನು ಹಾದು ಹೋಗಿದೆ.
ಬೇಡಿಕೆಗಳೇನು?; ಸಾರಿಗೆ ಮುಷ್ಕರ ಸಮಯದಲ್ಲಿ ವಜಾ ಮಾಡಿರುವ ನೌಕರರನ್ನು ಪುನರ್ ನೇಮಕ ಮಾಡಬೇಕು. ವರ್ಗಾವಣೆ, ಪೊಲೀಸ್ ಕೇಸ್, ಅಮಾನತ್ತು ಮಾಡಿರುವ ಆದೇಶವನ್ನು ಹಿಂಪಡೆಯಬೇಕು. ದಿನಾಂಕ: 6-4-2021ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡಬೇಕು.
ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ನೀಡಬೇಕು. 1992 ರಿಂದ ಈಚೆಗೆ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಿಲ್ಲ. ಈ ಕೂಡಲೇ ಕಾರ್ಮಿಕ ಸಂಘಗಳ ಚುನಾವಣೆ ನಡೆಸಬೇಕು.
ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸುವುದು ಹಾಗೂ ಇತರೆ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನ ಸಿಬ್ಬಂದಿ ನೇಮಕ ಮಾಡಿಕೊಳ್ಳುವುದನ್ನು ಕೈ ಬಿಡುವ ಮೂಲಕ ಸಾರಿಗೆ ಸಂಸ್ಥೆ ಖಾಸಗೀಕರಣವನ್ನು ಕೈ ಬಿಡಬೇಕು.‌ ಕೆಲವು ಮಾರ್ಗಗಳನ್ನು ಖಾಸಗಿ ವಹಾನಗಳ ಚಾಲನೆಗೆ ಅನುಮತಿ ನೀಡಿ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣದ ಮೂಲಕ ರಾಜ್ಯದ ಯುವಕರಿಗೆ ಮತ್ತಷ್ಟು ನಿರುದ್ಯೋಗ ಸಮಸ್ಯೆಯನ್ನು ಸೃಷ್ಠಿ ಮಾಡುವ ಯೋಜನೆಯನ್ನು ಈ ಕೂಡಲೇ ಕೈ ಬಿಡಬೇಕು ಎನ್ನುವುದು ನೌಕರರ ಬೇಡಿಕೆಯಾಗಿದೆ. ಒಟ್ಟಿನಲ್ಲಿ ಸರ್ಕಾರ ಸ್ಪಂದಿಸದಿರುವುದು ನೌಕರರ ಕೂಗು ಅರಣ್ಯ ರೋಧನವಾಯ್ತೆ ಎಂಬ ಪ್ರಶ್ನೆ ಕಾಡುವಂತೆ ಮಾಡಿದೆ.

ಚಿತ್ರ; ತುಮಕೂರಿನಲ್ಲಿ ನಡೆದ ಸೈಕಲ್ ಜಾಥಾದಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ತುಮಕೂರು ಜಿಲ್ಲಾಧ್ಯಕ್ಷ ಕೆ.ವಿ. ಪುಟ್ಟಯ್ಯ, ವಿಭಾಗೀಯ ಉಸ್ತುವಾರಿ ಜಿ.ಬಿ. ನಾಗೇಶ್, ಪ್ರಧಾನ ಕಾರ್ಯದರ್ಶಿ ಕರಿಯಣ್ಣ, ಉಪಾಧ್ಯಕ್ಷರು ಸೈಯದ್ ಸಾಧಿಕ್, ಮಹಿಳಾ ಅಧ್ಯಕ್ಷೆ ಕಲಾವತಿ, ಮಹಿಳಾ ಉಪಾಧ್ಯಕ್ಷೆ ನೇತ್ರಾವತಿ ಮತ್ತಿತರರು ಪಾಲ್ಗೊಂಡಿದ್ದರು.

About The Author

You May Also Like

More From Author

+ There are no comments

Add yours