ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

1 min read

 

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Tumkurnews
ತುಮಕೂರು; ಹಿರೇಹಳ್ಳಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಆಟೋಮೋಟಿವ್ ಕೌಶಲ್ಯ ಅಭಿವೃದ್ದಿ ತರಬೇತಿ ನೀಡಲು ಪೂರ್ಣವಧಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಟೋಮೋಟಿವ್ ಅಸೆಂಬ್ಲಿ ಫಿಟ್ಟರ್ ಮತ್ತು ಆಟೋಮೋಟಿವ್ ವೆಲ್ಡರ್-ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆ ಪ್ರಮಾಣ ಪತ್ರದೊಂದಿಗೆ ನ.24ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು-572168 ಅಥವಾ ಮೊ.ಸಂ. 8660191083, 9739172455, 8660101978ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

You May Also Like

More From Author

+ There are no comments

Add yours