Tumkurnews
ತುಮಕೂರು: ಗ್ರಾಮಾಂತರ ಕ್ಷೇತ್ರದ ಇತಿಹಾಸ ಪ್ರಸಿದ್ಧ ಶ್ರೀ ಗೂಳೂರು ಮಹಾ ಗಣಪತಿ ಜಾತ್ರಾ ಮಹೋತ್ಸವದ ಅಂಗವಾಗಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಡಿ.ಸಿ ಗೌರಿಶಂಕರ್ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ ಉತ್ತಮ ಮಳೆ ಬೆಳೆಯಾಗಿ, ಪ್ರತಿ ವರ್ಷ ಗೂಳೂರು ಹಾಗೂ ತಾಲೂಕಿನದ್ಯಾಂತ ಎಲ್ಲಾ ಕೆರೆಗಳು ತುಂಬಿ ಕೋಡಿ ಬೀಳಲಿ, ರೈತರು ಸಂತಸದಿಂದ ಹಾಗೂ ಕ್ಷೇತ್ರದ ಜನತೆ ನೆಮ್ಮದಿಯಾಗಿರಲೆಂದು ಗೌರಿಶಂಕರ್ ಪ್ರಾರ್ಥಿಸಿದರು.
ಪೂಜಾ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ತಮ್ಮ ಅವಧಿಯಲ್ಲಿ ಗೂಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಪ್ರಾಮಾಣಿಕವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದೆ. ಗೂಳೂರು ಗ್ರಾಮದಲ್ಲಿ ತಮ್ಮ ತಂದೆಯವರ ಹೆಸರಿನಲ್ಲಿ ಸುಮಾರು 40 ಲಕ್ಷ ರೂ.ಗಳ ವೆಚ್ಚದಲ್ಲಿ ಗಣಪತಿ ದೇವಾಲಯದ ಆರ್ಚ್ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದೆ. ಪ್ರತಿ ವರ್ಷ ದೇವಾಲಯಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಿದ್ದು, ಭಕ್ತಾದಿಗಳಿಗೆ ಶೌಚಾಲಯದ ವ್ಯವಸ್ಥೆ ಇಲ್ಲದ ಕಾರಣ, ಮುಂದಿನ ವರ್ಷದ ಜಾತ್ರೆಯೊಳಗೆ ತಮ್ಮ ಸ್ವಂತ ಹಣದಲ್ಲಿ ಹೈಟೆಕ್ ಶೌಚಾಲಯವನ್ನು ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣೇಗೌಡ, ಪ್ರಮುಖರಾದ ಪಾಲನೇತ್ರಯ್ಯ, ಗ್ರಾಮಪಂಚಾಯ್ತಿ ಸದಸ್ಯೆ ವಿಜಯಕುಮಾರಿ ಪಾಲನೇತ್ರಯ್ಯ, ಸ್ಥಳೀಯ ಹಾಗೂ ಅಕ್ಕಪಕ್ಕದ ಗ್ರಾಮ ಪಂಚಾಯಿತಿ ಸದಸ್ಯರುಗಳು, ಮುಖಂಡರುಗಳು, ಕಾರ್ಯಕರ್ತರು ಹಾಗೂ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.
+ There are no comments
Add yours