ಟೈಲರ್ ಮಕ್ಕಳಿಗೂ ವಿದ್ಯಾನಿಧಿ; ಮುಖ್ಯಮಂತ್ರಿ ಭರವಸೆ
Tumkurnews
ಚಿಕ್ಕಮಗಳೂರು; ರೈತರ ಮಕ್ಕಳಿಗೆ ಜಾರಿಗೊಳಿಸಿರುವ ವಿದ್ಯಾನಿಧಿ ಯೋಜನೆ ಸೌಲಭ್ಯವನ್ನು ಟೈಲರ್ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಜಿಲ್ಲೆಯ ಕೊಪ್ಪದಲ್ಲಿ ಭಾನುವಾರ ನಡೆದ ಬಿಜೆಪಿ ಜನ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಟೈಲರ್ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಬೇಕು ಎಂದು ಇಲ್ಲಿನವರು ಮನವಿ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
+ There are no comments
Add yours