Tumkurnews
ತುಮಕೂರು; ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ತುಮಕೂರು ನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಯಾರೆಂಬುದನ್ನು ಸ್ಪಷ್ಟಪಡಿಸಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯಾಗಿ ಗೋವಿಂದ ರಾಜು ಸ್ಪರ್ಧಿಸುತ್ತಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ಅಟ್ಟಿಕಾ ಬಾಬುಗೆ ಶಾಕ್; ನಗರ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಪಡೆಯಲು ಪ್ರಯತ್ನ ಮಾಡುತ್ತಿದ್ದ ಅಟ್ಟಿಕಾ ಬಾಬುಗೆ ಕುಮಾರ ಸ್ವಾಮಿ ಅವರ ಹೇಳಿಕೆ ಶಾಕ್ ನೀಡಿದ್ದು, ಮುಂದಿನ ಬೆಳವಣಿಗೆಯನ್ನು ಕಾದು ನೋಡಬೇಕಿದೆ.
+ There are no comments
Add yours