ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ
Tumkurnews
ತುಮಕೂರು; ಡಿ.7ರ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೊರಡುವ ಮುಖ್ಯಮಂತ್ರಿಗಳು, ಬೆಳಿಗ್ಗೆ 10.05ಕ್ಕೆ ತುಮಕೂರು ವಿ.ವಿ.ಯ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಬಳಿಕ ನಗರದ ತುಮಕೂರು -ಶಿವಮೊಗ್ಗ ರಿಂಗ್ ರಸ್ತೆಯಲ್ಲಿ ಏರ್ಪಡಿಸಿರುವ ನಾರಾಯಣ ಉಚಿತ ನೇತ್ರ ಚಿಕಿತ್ಸಾ ಕೇಂದ್ರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಬೆಳಿಗ್ಗೆ 11.30 ರಿಂದ ಸಂಜೆ 4 ಗಂಟೆಯವರೆಗೆ ಗೂಳೂರು ಪಟ್ಟಣ ಮತ್ತು ಕುಣಿಗಲ್ ಮತ್ತು ಕೊರಟಗೆರೆ ತಾಲ್ಲೂಕುಗಳಲ್ಲಿ ಏರ್ಪಡಿಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ಹುಲಿಕುಂಟೆ ಬೈಪಾಸ್ ರಸ್ತೆ ಹೆಲಿಪ್ಯಾಡ್‍ಗೆ ಆಗಮಿಸಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
+ There are no comments
Add yours