ಜಿಲ್ಲಾ ಅತ್ಯುತ್ತಮ ಯುವ ಸಂಘ ಪ್ರಶಸ್ತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

1 min read

 

ಜಿಲ್ಲಾ ಅತ್ಯುತ್ತಮ ಯುವ ಸಂಘ ಪ್ರಶಸ್ತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
Tumkurnews
ತುಮಕೂರು; ನೆಹರು ಯುವ ಕೇಂದ್ರದ ವತಿಯಿಂದ 2021-22ನೇ ಸಾಲಿನಲ್ಲಿ ಕ್ರೀಡೆ, ಸಾಂಸ್ಕೃತಿಕ, ರಾಷ್ಟ್ರೀಯ ಭಾವೈಕ್ಯತೆ, ಕೋಮು ಸೌಹಾರ್ದತೆ, ಆರೋಗ್ಯ, ಗ್ರಾಮೀಣ ಅಭಿವೃದ್ಧಿ, ಶಿಕ್ಷಣ ಸೇರಿದಂತೆ ಸಾಮಾಜಿಕ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವ ಜಿಲ್ಲೆಯ ಯುವಕ, ಯುವತಿ ಸಂಘಗಳಿಗೆ ಜಿಲ್ಲಾ ಅತ್ಯುತ್ತಮ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 12ರವರೆಗೆ ವಿಸ್ತರಿಸಲಾಗಿದೆ.
ಪ್ರಶಸ್ತಿಯು 25ಸಾವಿರ ರೂ.ಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ, ತುಮಕೂರು ಕಚೇರಿ ಅಥವಾ ಮೊ.ಸಂ. 9945038684ನ್ನು ಸಂಪರ್ಕಿಸುವಂತೆ ಜಿಲ್ಲಾ ಯುವಜನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours