Tumkurnews
ತುಮಕೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 18 ವರ್ಷ ಪೂರೈಸಿದ ಜಿಲ್ಲೆಯ ಎಲ್ಲಾ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಕಾಲೇಜು ಶಿಕ್ಷಣ ಸಂಸ್ಥೆಗಳಿಂದ ನಿಗದಿತ ನಮೂನೆಯಲ್ಲಿ ವಿದ್ಯಾರ್ಥಿಗಳ ವಿವರವನ್ನು ಪಡೆದು ಕಳುಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು, ಸಂಬಂಧಪಟ್ಟ ಕಾಲೇಜು, ಸಂಸ್ಥೆಯ ಹೆಸರು, ಸಹಿ ಮತ್ತು ಆಯಾ ಪ್ರಾಂಶುಪಾಲರ ಮೊಹರಿನೊಂದಿಗೆ ನಮೂನೆ 1 ರಲ್ಲಿ 01/01/2023ಕ್ಕೆ 18 ವರ್ಷ ತುಂಬುವ ಯುವಮತದಾರರ ಮಾಹಿತಿಯನ್ನು ಪಡೆಯಬೇಕು ಎಂದರು.
ನಮೂನೆ-2ರಲ್ಲಿ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು ಎಲ್ಲಾ ಕಾಲೇಜು, ಸಂಸ್ಥೆಗಳ ಮಾಹಿತಿಯನ್ನು ಕ್ರೋಢೀಕರಿಸಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಕಳುಹಿಸಿಕೊಡುವಂತೆ ಅವರು ಸೂಚಿಸಿದರು.
ತುಮಕೂರು ಜಿಲ್ಲೆಯಲ್ಲಿ 21 ಲಕ್ಷ ಮತದಾರರು!; ತಿದ್ದುಪಡಿಗೆ ಅವಕಾಶ ನೀಡಿದ ಆಯೋಗ
+ There are no comments
Add yours