ಈ‌ ಖಾಯಿಲೆಯಿಂದ ಮಕ್ಕಳಲ್ಲಿ ಮರಣ ಪ್ರಮಾಣ ಶೇ.20 ರಿಂದ 30ರಷ್ಟಿದೆ; ತಪ್ಪದೇ ಲಸಿಕೆ ಹಾಕಿಸಿ

1 min read

 

ಈ‌ ಖಾಯಿಲೆಯಿಂದ ಮಕ್ಕಳಲ್ಲಿ ಮರಣ ಪ್ರಮಾಣ ಶೇ.20 ರಿಂದ 30ರಷ್ಟಿದೆ

Tumkurnews
ತುಮಕೂರು; ಜಪಾನಿಸ್ ಎನ್‍ಸೆಫಲೈಟಿಸ್(ಜೆಇ) ಲಸಿಕೆಗಳಿಂದ ಮೆದುಳು ಜ್ವರದ ವಿರುದ್ದ ಹೋರಾಡಲು ಇಂದಿನಿಂದ ಡಿಸೆಂಬರ್ 5ರಿಂದ 24ರವರೆಗೆ, ಒಂದರಿಂದ ಹದಿನೈದು ವರ್ಷದ ಮಕ್ಕಳಿಗೆ ಜೆಇ ಲಸಿಕೆ ಚುಚ್ಚುಮದ್ದು ನೀಡಲಿದ್ದು, ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಸಂಸದ ಜಿ.ಎಸ್ ಬಸವರಾಜು ಮನವಿ ಮಾಡಿದರು.

12 ಮೆದುಳು ಜ್ವರ ಪ್ರಕರಣ ಪತ್ತೆ; ನಿಮ್ಮ ಮಕ್ಕಳಿಗೆ ತಪ್ಪದೇ ಈ ಲಸಿಕೆ ಹಾಕಿಸಿ; ಡಿಸಿ ಮನವಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೆ.ಇ.ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೋಷಕರಿಗೆ ಈ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವ ಅಗತ್ಯತೆ ಇದೆ. ಭಯ ಬೀಳದೆ ಮಕ್ಕಳಿಗೆ ಈ ಲಸಿಕೆಯನ್ನು ಹಾಕಿಸಬೇಕು. ಈ ಖಾಯಿಲೆ ಕಾಣಿಸಿಕೊಂಡ ಮಕ್ಕಳಲ್ಲಿ ಮರಣ ಪ್ರಮಾಣ ಶೇ.20 ರಿಂದ 30ರಷ್ಟಿದ್ದು, ಗುಣ ಹೊಂದಿದವರಲ್ಲಿ ಶೇ.30 ರಿಂದ 50ರಷ್ಟು ಪ್ರಕರಣಗಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟಾಗುತ್ತದೆ. ಆದುದರಿಂದ 1 ರಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಸಹ ತಪ್ಪದೇ ಈ ಲಸಿಕೆ ಹಾಕಿಸುವಂತೆ ತಿಳಿಸಿದರು.

ಹೆಚ್ಚಾಗುತ್ತಿದೆ ಡೆಂಗ್ಯೂ; ಸಾವು, ನೋವಾಗದಂತೆ ಎಚ್ಚರವಹಿಸಿ; ಜಿಲ್ಲಾಧಿಕಾರಿ ಸೂಚನೆ
ಜಿಪಂ ಸಿಇಒ ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ ಸುಮಾರು ಐದೂವರೆ ಲಕ್ಷ ಮಕ್ಕಳಿಗೆ ಈ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಖಾಸಗಿ, ಅನುದಾನಿತ ಸೇರಿದಂತೆ ಎಲ್ಲಾ ಶಾಲೆಯ ಮಕ್ಕಳು ಹಾಗೂ ತದನಂತರ ಅಂಗನವಾಡಿ ಮಕ್ಕಳಿಗೂ ಸಹ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಇನ್ನು ಮೂರು ವಾರದೊಳಗಾಗಿ ಈ ಲಸಿಕಾ ಅಭಿಯಾನವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕಿದ್ದು, ಇದೊಂದು ದೊಡ್ಡ ಮಟ್ಟದ ಲಸಿಕಾ ಅಭಿಯಾನವಾಗಿದ್ದು, ಸಾರ್ವಜನಿಕರು, ಪೋಷಕರು ಸಹಕರಿಸುವಂತೆ ಕೋರಿದರು.
2ನೇ ಹಂತದಲ್ಲಿ ತುಮಕೂರು ಜಿಲ್ಲೆಯಲ್ಲಿ ಈ ಲಸಿಕಾ ಅಭಿಯಾನ ಹಮ್ಮಿಕೊಳ್ಳಲು ಆರೋಗ್ಯ ಇಲಾಖೆಯು ನಿರ್ದೇಶಿಸಿದ್ದು, ಈ ಅಭಿಯಾನದ ದಿನಾಂಕಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಕೇಂದ್ರಗಳಲ್ಲೂ ಸಹ ಲಸಿಕೆಯನ್ನು ನೀಡಲಾಗುವುದು ಎಂದು ತಿಳಿಸಿದರು.

18 ವರ್ಷ ಮೇಲ್ಪಟ್ಟ ಯುವ ಮತದಾರರ ಪಟ್ಟಿ ಕೊಡಿ; ಕಾಲೇಜುಗಳಿಗೆ ಆಯೋಗದ ಸೂಚನೆ
ಕಾರ್ಯಕ್ರಮದಲ್ಲಿ ಡಿಎಚ್‍ಓ ಡಾ.ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ವೀಣಾ, ಆರ್‍ಸಿಎಚ್ ಅಧಿಕಾರಿ ಡಾ. ಕೇಶವರಾಜ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲೆ ಡಾ. ರಜನಿ, ರಾಜ್ಯ ನೋಡಲ್ ಅಧಿಕಾರಿ ಡಾ.ಪ್ರಶಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮೀ ಕಾಂತ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತುಮಕೂರು; ಜಿಲ್ಲೆಯಲ್ಲಿ 30,165 ಯುವ ಮತದಾರರ ನೋಂದಣಿ; ಶಾಲಾಕಾಲೇಜುಗಳಲ್ಲಿ ಜಾಗೃತಿ

About The Author

You May Also Like

More From Author

+ There are no comments

Add yours