ಹಾಸ್ಟೆಲ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2022-23ನೇ ಸಾಲಿನ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್’ಗಳ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
ಡಿ.5ರಿಂದ ಡಿ.19ರ ವರೆಗೆ ಸ್ನಾತಕೋತ್ತರ ಹಾಗೂ ವೃತ್ತಿಪರ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರ ಪ್ರಕಟಣೆ ತಿಳಿಸಿದೆ.
+ There are no comments
Add yours