ರೈತರಿಗೆ ವಿವಿಧ ಪಶುಪಾಲನಾ ತರಬೇತಿ
Tumkurnews
ತುಮಕೂರು; ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ವಿವಿಧ ಪಶುಪಾಲನೆಗೆ ಸಂಬಂಧಿಸಿದಂತೆ ಉಚಿತ ತರಬೇತಿ ನೀಡಲಾಗುವುದು.
ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ
ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ಡಿ.12 ಮತ್ತು 13ರಂದು ಹಾಗೂ ಆಧುನಿಕ ಹೈನುಗಾರಿಕೆ ಕುರಿತು ಡಿ.15 ಹಾಗೂ 16ರಂದು 2 ದಿನಗಳ ಕಾಲ 25 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು 2 ಪಾಸ್‍ಪೋರ್ಟ್ ಅಳತೆ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು.
ಆಸಕ್ತ ರೈತರು ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಕಾಲ್‍ಟೆಕ್ಸ್ ಸರ್ಕಲ್, ಕುಣಿಗಲ್ ರಸ್ತೆ, ತುಮಕೂರು ಇಲ್ಲಿ ತರಬೇತಿಗಾಗಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ದೂ.ವಾ.ಸಂ. 0816-2251214ನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಲ್ ಕೌಂಟರ್ ಇಲ್ಲದ ರಾಜ್ಯದ ಮೊದಲ ಆಸ್ಪತ್ರೆ ಉದ್ಘಾಟನೆ; ನಯಾ ಪೈಸೆ ಪಡೆಯಲ್ಲ ಎಂದ ಸಿಎಂ!
+ There are no comments
Add yours